Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:35 - ಕನ್ನಡ ಸತ್ಯವೇದವು C.L. Bible (BSI)

35 ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ಹೊರಟು ಅಡವಿಯ ಸ್ಥಳಕ್ಕೆ ಹೋಗಿ ದೇವರನ್ನು ಪ್ರಾರ್ಥಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜೆಜು ದುಸ್ರೆಂದಿಸಿ ಸಕ್ಕಾಳ್‍ಫಿಡೆ ಉಟ್ಲೊ, ಅನಿ ಕೊನ್ಬಿನಸಲ್ಲ್ಯಾ ಶಾಂತ್ ಜಾಗ್ಯಾರ್ ಗೆಲೊ. ಅನಿ ಥೈ ಮಾಗ್ನಿ ಕರುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:35
15 ತಿಳಿವುಗಳ ಹೋಲಿಕೆ  

ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು.


ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.


ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೇ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು.


ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ:


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ಪ್ರೀತಿಗೆ ಪ್ರತಿಯಾಗಿ ಮಾಡುತಿಹರು ಆಪಾದನೆ I ಆದರೂ ಮಾಡುತ್ತಿರುವೆ ಅವರಿಗಾಗಿ ಪ್ರಾರ್ಥನೆ II


ಈ ಸಮಾಚಾರವನ್ನು ಕೇಳಿದ ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪುಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು.


ಇತ್ತ, ಸಿಮೋನನೂ ಅವನ ಜೊತೆಗಾರರೂ ಯೇಸುವನ್ನು ಹುಡುಕಿಕೊಂಡು ಹೋದರು. ಅವರನ್ನು ಕಂಡಕೂಡಲೇ, “ಎಲ್ಲರು ತಮ್ಮನ್ನೇ ಹುಡುಕುತ್ತಿದ್ದಾರೆ,” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು