Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:14 - ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಅದನ್ನು ಕಂಡಾಗ ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹೆ ಬಗುನ್ ಜೆಜು ಅಪ್ನಾಚ್ಯಾ ಶಿಸಾಂಚ್ಯಾ ವರ್‍ತಿ ರಾಗ್ ಹೊಲೊ ಅನಿ “ಪೊರಾಕ್ನಿ ಮಾಜೆಕ್ಡೆ ಯೆವ್ಕ್ ಸೊಡಾ, ತೆಂಕಾ ಅಡ್ವುನಕಾಶಿ, ಕಶ್ಯಾಕ್ ಮಟ್ಲ್ಯಾರ್ ದೆವಾಚೆ ರಾಜ್ ಅಸ್ಲ್ಯಾಂಚೆಚ್,”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:14
36 ತಿಳಿವುಗಳ ಹೋಲಿಕೆ  

ಆಗ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ, ಸ್ವರ್ಗಸಾಮ್ರಾಜ್ಯ ಇಂಥವರದೇ,” ಎಂದರು.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು.


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.


ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.


ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಏಕೆಂದರೆ, ಕ್ರೈಸ್ತವಿಶ್ವಾಸಿಯಾದ ಸತಿಯ ಮುಖಾಂತರ ಪತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾನೆ. ಅಂತೆಯೇ ಕ್ರೈಸ್ತವಿಶ್ವಾಸಿಯಾದ ಪತಿಯ ಮುಖಾಂತರ ಸತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾಳೆ. ಇಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವಜನರೊಂದಿಗೆ ಸಂಬಂಧ ಉಳ್ಳವರಾಗಿದ್ದಾರೆ.


ಶುಭಸಂದೇಶವನ್ನು ತಿರಸ್ಕರಿಸಿದ್ದರಿಂದ ಇಸ್ರಯೇಲರು ದೇವರಿಗೆ ಶತ್ರುಗಳಾದರು. ಹೀಗಾದುದು ನಿಮ್ಮ ಹಿತಕ್ಕೋಸ್ಕರವೆ. ದೇವರಿಂದ ಆಯ್ಕೆ ಆದವರಾದರಿಂದ, ಪಿತಾಮಹ ಅಬ್ರಹಾಮ್, ಇಸಾಕ್ ಮತ್ತು ಯಕೋಬರ ನಿಮಿತ್ತ ಅವರು ದೇವರಿಗೆ ಮಿತ್ರರಾದರು.


ಹಿಟ್ಟಿನಲ್ಲಿ ಮೊದಲ ಹಿಡಿ ನೈವೇದ್ಯ ಆದಮೇಲೆ ಹಿಟ್ಟಿನ ರಾಶಿಯೆಲ್ಲಾ ನೈವೇದ್ಯ ಆದಂತೆಯೇ. ಅಂತೆಯೇ, ಬೇರು ದೇವರದಾಗಿದ್ದ ಮೇಲೆ ರೆಂಬೆಗಳೂ ದೇವರಿಗೆ ಸೇರಿದವು ಅಲ್ಲವೆ?


ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು’ ಎಂದಿದ್ದಾರೆ ದೇವರು.


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಆಗ ಯೇಸು ಹಿಂದಕ್ಕೆ ತಿರುಗಿ, ತಮ್ಮ ಶಿಷ್ಯರನ್ನು ನೋಡಿ, ಪೇತ್ರನನ್ನು ಗದರಿಸುತ್ತಾ, “ಸೈತಾನನೇ, ತೊಲಗು ಇಲ್ಲಿಂದ; ನಿನ್ನ ಈ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.


ಮರೆಮಾಡೆವು ಅವರ ಸಂತತಿಯಾದ ನಿಮಗೆ I ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


ಆದರೆ ನಿಮ್ಮ ಮಕ್ಕಳನ್ನು, ಪರರ ಪಾಲಾಗುವರು ಎಂದು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದ ನಾಡನ್ನು ಅವರು ಅನುಭವಿಸುವರು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಹನ್ನಳು, “ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ,” ಎಂದು ಹೇಳಿದಳು.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.


ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.”


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ ಮಕ್ಕಳಿಗೂ ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು