Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:24 - ಕನ್ನಡ ಸತ್ಯವೇದವು C.L. Bible (BSI)

24 ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಶಿಷ್ಯರು ಆತನ ಮಾತುಗಳನ್ನು ಕೇಳಿ ಬೆರಗಾದರು. ಯೇಸು ತಿರಿಗಿ ಅವರಿಗೆ - ಮಕ್ಕಳಿರಾ, ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸುವಿನ ಈ ಮಾತನ್ನು ಕೇಳಿ ಶಿಷ್ಯರು ಬೆರಗಾದರು. ಆದರೆ ಯೇಸು ಮತ್ತೆ, “ನನ್ನ ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಶಿಷ್ಯರು ಯೇಸುವಿನ ಮಾತುಗಳಿಗೆ ಬೆರಗಾದರು. ಆದರೆ ಯೇಸು ತಿರುಗಿ ಅವರಿಗೆ, “ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜುನ್ ಅಶೆ ಮಟಲ್ಲೆ ಆಯ್ಕುನ್ ಶಿಸಾ ಅಜಾಪ್ ಹೊಲಿ. ಅನಿಬಿ ಜೆಜುನ್ “ಮಾಜ್ಯಾ ಪೊರಾನೊ, ದೆವಾಚ್ಯಾ ರಾಜಾತ್ ಜಾತಲೆ ಮಟ್ಲ್ಯಾರ್ ಕವ್ಡೊ ಕಸ್ಟ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:24
28 ತಿಳಿವುಗಳ ಹೋಲಿಕೆ  

ದ್ರವ್ಯವನ್ನು ನಂಬಿದವನು ಉದುರಿಹೋಗುವನು; ದೈವಭಕ್ತನು ಕುಡಿಯಂತೆ ಚಿಗುರುವನು.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಐಶ್ವರ್ಯವಂತನಿಗೆ ಹಣವೆ ಬಲವಾದ ಕೋಟೆ; ಅದುವೇ ಎತ್ತರವಾದ ಪೌಳಿಗೋಡೆ.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು.


ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು.


ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು. “ಹಾಗಾದರೆ, ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದುಕೊಂಡರು.


“ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.


ಆಗ ಯೇಸುಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು