Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:26 - ಕನ್ನಡ ಸತ್ಯವೇದವು C.L. Bible (BSI)

26 ಇದನ್ನು ಕೇಳಿದ ಮೇಲಂತೂ ಶಿಷ್ಯರಿಗೆ ಅಪರಿಮಿತ ಆಶ್ಚರ್ಯ ಆಯಿತು. “ಹಾಗಾದರೆ ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದು ತಮ್ಮ ತಮ್ಮೊಳಗೇ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಈ ಮಾತಿಗೆ ಅವರು ಇನ್ನಷ್ಟಾಶ್ಚರ್ಯಪಟ್ಟು - [ಹೀಗಿದ್ದರೆ] ಯಾರಿಗೆ ರಕ್ಷಣೆಯಾದೀತು ಎಂದು ತಮ್ಮ ತಮ್ಮೊಳಗೆ ಹೇಳಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಶಿಷ್ಯರು ಇನ್ನೂ ಬೆರಗಾಗಿ, ಒಬ್ಬರಿಗೊಬ್ಬರು, “ಹಾಗಾದರೆ ರಕ್ಷಣೆಹೊಂದಲು ಯಾರಿಗೆ ಸಾಧ್ಯ?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದಕ್ಕೆ ಶಿಷ್ಯರು ಅತ್ಯಂತ ಆಶ್ಚರ್ಯಪಟ್ಟು ತಮ್ಮೊಳಗೆ, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಶಿಸಾ ಅನಿ ಉಲ್ಲಿ ಅಜಾಪ್ ಹೊಲಿ ಅನಿ “ತಸೆ ಹೊಲ್ಯಾರ್, ಕೊನ್ ರಕ್ಷನ್ ಹೊತಾ?” ಮನುನ್ ಬೊಲುನ್ಗೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:26
9 ತಿಳಿವುಗಳ ಹೋಲಿಕೆ  

“ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನೂ ನಿನ್ನ ಮನೆಯವರೆಲ್ಲರೂ ಜೀವೋದ್ಧಾರವನ್ನು ಹೊಂದುವಿರಿ,” ಎಂದು ಅವರು ಉತ್ತರಕೊಟ್ಟರು.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.


ಆಗ ಎದುರುಗಾಳಿ ನಿಂತುಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು.


ಇದನ್ನು ಕೇಳಿದವರು, “ಹಾಗಾದರೆ ಯಾರು ತಾನೇ ಜೀವೋದ್ಧಾರ ಹೊಂದಲು ಸಾಧ್ಯ?” ಎನ್ನಲು


ಆಗ ಒಬ್ಬನು, “ಸ್ವಾಮೀ, ಜೀವೋದ್ಧಾರ ಹೊಂದುವವರು ಕೆಲವರು ಮಾತ್ರವೊ?” ಎಂದು ವಿಚಾರಿಸಿದನು.


ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿಂತಲೂ ಒಂಟೆಯು ಸೂಜಿಗಣ್ಣಲ್ಲಿ ನುಸುಳುವುದು ಸುಲಭ,” ಎಂದರು.


ಯೇಸು ಅವರನ್ನು ನಿಟ್ಟಿಸಿ ನೋಡಿ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು