Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:29 - ಕನ್ನಡ ಸತ್ಯವೇದವು C.L. Bible (BSI)

29 ಆಗ ಯೇಸು, “ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ನನ್ನ ನಿವಿುತ್ತವೂ ಸುವಾರ್ತೆಯ ನಿವಿುತ್ತವೂ ಮನೆಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವನೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನಗಾಗಿ ಮತ್ತು ಸುವಾರ್ತೆಗಾಗಿ ತನ್ನ ಮನೆಯನ್ನಾಗಲಿ ಸಹೋದರರನ್ನಾಗಲಿ ಸಹೋದರಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂಮಿಯನ್ನಾಗಲಿ ತ್ಯಜಿಸಿದ ಪ್ರತಿಯೊಬ್ಬ ವ್ಯಕ್ತಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ ಬಿಟ್ಟುಬಿಟ್ಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಜೆಜುನ್ “ಹೊಯ್, ಮಿಯಾ ತುಮ್ಕಾ ಸಾಂಗ್ತಾ, ಮಾಜೆ ಸಾಟ್ನಿ ಅನಿ ದೆವಾಚ್ಯಾ ಬರ್ಯಾ ಖಬ್ರೆ ಸಾಟ್ನಿ, ಅಪ್ನಾಚೆ ಘರ್ ಹೊಂವ್ದಿ, ಭಾವಾಕ್ನಿ-ಭೆನಿಯಾಕ್ನಿ ಹೊಂವ್ದಿ, ಬಾಯ್ಕ್-ಬಾಬಾಕ್ ಹೊಂವ್ದಿ, ಪೊರಾಕ್ನಿ ಹೊಂವ್ದಿ, ಶೆತ್ ಹೊಂವ್ದಿ, ಜೊ ಮಾನುಸ್ ಸೊಡುನ್ ಯೆತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:29
13 ತಿಳಿವುಗಳ ಹೋಲಿಕೆ  

ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ,


ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.


ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.


ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಚಿಂತಿಸಬೇಕಾಗಿಲ್ಲ. ಈಜಿಪ್ಟ್ ದೇಶದ ಅತ್ಯುತ್ತಮವಾದುವುಗಳು ನಿಮ್ಮದಾಗುವುವು'."


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.


ಅದಕ್ಕೆ ಯೇಸು, “ನಿಮಗೆ ಖಂಡಿತವಾಗಿ ಹೇಳುತ್ತೇನೆ: ಯಾವನು ದೇವರ ಸಾಮ್ರಾಜ್ಯದ ನಿಮಿತ್ತ ಮನೆಯನ್ನಾಗಲಿ, ಮಡದಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳು ಮರಿಯನ್ನಾಗಲಿ ತ್ಯಜಿಸುತ್ತಾನೋ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು