Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:30 - ಕನ್ನಡ ಸತ್ಯವೇದವು C.L. Bible (BSI)

30 ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತಂಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು; ಅದಲ್ಲದೆ ಮುಂದಿನ ಲೋಕದಲ್ಲಿ ಅಮರಜೀವವನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನಿಗೆ ಈಗಿನ ಕಾಲದಲ್ಲಿ ಮನೆ ಅಣ್ಣ ತಮ್ಮ ಅಕ್ಕ ತಂಗಿ ತಾಯಿ ಮಕ್ಕಳು ಭೂವಿು ಇವೆಲ್ಲವೂ ಹಿಂಸೆಗಳು ಸಹಿತವಾಗಿ ನೂರರಷ್ಟು ಸಿಕ್ಕೇ ಸಿಕ್ಕುತ್ತವೆ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೂರರಷ್ಟು ಹೆಚ್ಚಾಗಿ ಪಡೆಯುತ್ತಾನೆ. ಈ ಪ್ರಪಂಚದಲ್ಲಿ ಅವನು ಅನೇಕ ಮನೆಗಳನ್ನು, ಸಹೋದರರನ್ನು, ಸಹೋದರಿಯರನ್ನು, ತಾಯಂದಿರನ್ನು, ಮಕ್ಕಳನ್ನು ಮತ್ತು ಭೂಮಿಯನ್ನು ಹಿಂಸೆಗಳೊಂದಿಗೆ ಪಡೆದುಕೊಳ್ಳುವನು. ಅಲ್ಲದೆ ಬರಲಿರುವ ಲೋಕದಲ್ಲಿ ಅವನು ನಿತ್ಯಜೀವವನ್ನೂ ಹೊಂದಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತೆಕಾ ಶೆಂಬರ್ ವಾಟ್ಯಾನಿ ಗಾವ್ತಾ, ತವ್ಡೆಚ್ ನ್ಹಯ್ ಹ್ಯಾ ದುನಿಯಾತ್ ಪಾಜೆ ತವ್ಡಿ ಘರಾ, ಭಾವಾ, ಭೆನಿಯಾ, ಅವ್ಸಿಯಾ, ಪೊರಾ ಅನಿ ಶೆತ್ ಗಾಂವ್ತಾ ಅನಿ ಹೆಂಚ್ಯಾ ವಾಂಗ್ಡಾ ತ್ಯಾ ಮಾನ್ಸಾಕ್ ತರಾಸ್ಬಿ ಹಾಯ್. ಅನಿ ಹೆ ಸೊಡ್ಲ್ಯಾರ್ ಫಿಡೆ ಯೆತಲ್ಯಾ ಕಾಲಾತ್ ನಿರಂತರ್ ಜಿವನ್ಬಿ ತೆಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:30
32 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಅವನು ಈ ಕಾಲದಲ್ಲಿ ಅದಕ್ಕಿಂತಲೂ ಮಿಗಿಲಾದುದನ್ನೂ ಮುಂದಿನ ಲೋಕದಲ್ಲಿ ಅಮರಜೀವವನ್ನೂ ಪಡೆಯುವನು,” ಎಂದರು.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ಅಮಚ್ಯನು ಆ ದೈವಪುರುಷನನ್ನು, “ಹಾಗಾದರೆ ನಾನು ಇಸ್ರಯೇಲ್ ಸೈನ್ಯಕ್ಕಾಗಿ 3400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟುಬಿಟ್ಟೆನಲ್ಲಾ, ಏನು ಮಾಡುವುದು?,” ಎಂದು ಕೇಳಿದನು. ಅವನು, “ಸರ್ವೇಶ್ವರ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಕೊಡಬಲ್ಲರು,” ಎಂದನು.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು,


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.


ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು