Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:48 - ಕನ್ನಡ ಸತ್ಯವೇದವು C.L. Bible (BSI)

48 ಅನೇಕರು ‘ಸುಮ್ಮನಿರು’ ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಇನ್ನಷ್ಟು ಗಟ್ಟಿಯಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅನೇಕರು - ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಅನೇಕ ಜನರು ಆ ಕುರುಡನನ್ನು ಗದರಿಸಿ ಕೂಗಕೂಡದೆಂದು ಅವನಿಗೆ ಹೇಳಿದರು. ಆದರೆ ಆ ಕುರುಡನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು!” ಎಂದು ಮತ್ತೆಮತ್ತೆ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಸುಮ್ಮನಿರುವಂತೆ ಅನೇಕರು ಅವನಿಗೆ ಒತ್ತಾಯಪಡಿಸಿ ಹೇಳಿದರು. ಆದರೆ ಅವನು ಇನ್ನೂ ಗಟ್ಟಿಯಾಗಿ, “ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಇನ್ನಷ್ಟು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತನ್ನಾ ಲೊಕಾ ತೆಕಾ “ಗಪ್ ರ್‍ಹಾ” ಮನುನ್ ಜೊರ್ ಕರುಕ್ ಲಾಗ್ಲ್ಯಾರ್ಬಿ ತೊ “ದಾವಿದಾಚ್ಯಾ ಲೆಕಾ ಮಾಜಿ ದಯಾ ಕರ್!” ಮನುನ್ ಅನಿಬಿ ಜೊರಾನ್ ಬೊಬ್ ಮಾರುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:48
15 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಮುಂದೆ ಹೋಗುತ್ತಿದ್ದವರು, “ಸುಮ್ಮನಿರು” ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯೀರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು.


ಸುಮ್ಮನಿರಬೇಕೆಂದು ಜನರು ಅವರನ್ನು ಗದರಿಸಿದರು. ಅವರಾದರೋ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.


ಅನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು.


ನೀವು ನನ್ನನ್ನು ಹುಡುಕುವಿರಿ. ಮನಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.


ಕೆಲವರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಹರಸಲೆಂದು ಅವುಗಳನ್ನು ಯೇಸುಸ್ವಾಮಿಯ ಬಳಿಗೆ ಕರೆತಂದರು. ಶಿಷ್ಯರು ಆ ಜನರನ್ನು ಗದರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು