Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:51 - ಕನ್ನಡ ಸತ್ಯವೇದವು C.L. Bible (BSI)

51 ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಯೇಸು ಅವನನ್ನು - ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಲು ಆ ಕುರುಡನು - ನನಗೆ ಕಣ್ಣು ಬರುವಂತೆ ಮಾಡಬೇಕು, ಗುರುವೇ, ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಅವನನ್ನು ಕೇಳಿದನು. ಆ ಕುರುಡನು, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯೇಸು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ?” ಎಂದು ಕೇಳಲು, ಆ ಕುರುಡನು ಯೇಸುವಿಗೆ, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಜೆಜುನ್ ತೆಕಾ “ಮಿಯಾ ತುಕಾ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತ್ಯಾ ಕುಡ್ಡ್ಯಾನ್ “ಗುರುಜಿ, ಮಿಯಾ ಅನಿ ಬಗುಕ್ ಪಾಜೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:51
11 ತಿಳಿವುಗಳ ಹೋಲಿಕೆ  

“ನನ್ನಿಂದ ನಿಮಗೇನಾಗಬೇಕು?” ಎಂದು ಯೇಸು ಕೇಳಿದರು.


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ಅದೇ ರಾತ್ರಿ ದೇವರು ಸೊಲೊಮೋನನಿಗೆ ದರ್ಶನಕೊಟ್ಟು, “ನಿನಗೆ ಯಾವ ವರಬೇಕು, ಕೇಳಿಕೋ,” ಎಂದು ಹೇಳಿದರು.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ.


ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.


ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ).


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


ಅವನು ತನ್ನ ಮೇಲುಹೊದಿಕೆಯನ್ನು ಅಲ್ಲೇ ಬಿಟ್ಟು ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು.


ಆಗ ಸಹಸ್ರಾಧಿಪತಿ ಆ ಯುವಕನ ಕೈಹಿಡಿದು, ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, “ನೀನು ನನಗೆ ಹೇಳಬೇಕೆಂದು ಇರುವ ವಿಷಯವೇನು?” ಎಂದು ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು