Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:13 - ಕನ್ನಡ ಸತ್ಯವೇದವು C.L. Bible (BSI)

13 ದೂರದಲ್ಲಿ ಎಲೆ ತುಂಬಿದ ಅಂಜೂರದ ಮರವೊಂದು ಕಣ್ಣಿಗೆ ಬಿದ್ದಿತು. ಅದರಲ್ಲಿ ಹಣ್ಣೇನಾದರೂ ಸಿಕ್ಕೀತೆಂದು ಅಲ್ಲಿಗೆ ಹೋದರು. ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳೇ ಹೊರತು ಇನ್ನೇನೂ ಕಾಣಲಿಲ್ಲ. ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ಎಲೆಬಿಟ್ಟಿದ್ದ ಒಂದು ಅಂಜೂರದ ಮರವನ್ನು ದೂರದಲ್ಲಿ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಅದು ಅಂಜೂರದ ಹಣ್ಣಿನ ಕಾಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ಕಂಡು ಒಂದು ವೇಳೆ ಅದರಲ್ಲಿ ಹಣ್ಣು ಏನಾದರೂ ಸಿಕ್ಕೀತೆಂದುಕೊಂಡರು. ಆದರೆ ಯೇಸು ಅದರ ಹತ್ತಿರ ಬಂದಾಗ ಎಲೆಗಳನ್ನು ಹೊರತು ಮತ್ತೇನೂ ಕಾಣಲಿಲ್ಲ. ಅದು ಅಂಜೂರ ಫಲದ ಕಾಲವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಥೈ ವಾಟೆಚ್ಯಾ ದಂಡೆಕ್ ಎಕ್ ಪಾನಾನಿ ಭರಲ್ಲೆ ಅಂಜುರಾಚೆ ಝಾಡ್ ಹೊತ್ತೆ, ಥೈ ಕಾಯ್ ತರ್ ಗಾವ್ತಾ ಕಾಯ್ಕಿ ಮನುನ್ ಜೆಜು ತ್ಯಾ ಝಾಡಾಕ್ಡೆ ಗೆಲೊ, ಬಗಟ್ಲ್ಯಾರ್ ತ್ಯಾ ಝಾಡಾಕ್ ಪಾನಾ ಸೊಡುನ್ ಎಕ್ ಸೈತ್ ಹನ್ನ್ ನತ್ತೆ,ಖಾಲಿ ಪಾನಾ ಎವ್ಡಿಚ್ ಹೊತ್ತಿ.ಕಶ್ಯಾಕ್ ಮಟ್ಲ್ಯಾರ್ ತಿ ಅಂಜುರಾಚಿ ಹನ್ನಾ ಹೊತಲಿ ದಿಸಾ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:13
10 ತಿಳಿವುಗಳ ಹೋಲಿಕೆ  

ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದುಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ.


ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.


ರೂತಳು ಕೊಯ್ಯುವವರ ಹಿಂದೆ ಹೋಗುತ್ತಾ ಅಲ್ಲಲ್ಲಿ ಬಿದ್ದ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಸುದೈವದಿಂದ ಅದು ಎಲಿಮೆಲೆಕನ ನೆಂಟನಾದ ಬೋವಜನ ಹೊಲವಾಗಿತ್ತು.


ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು !


ಮರುದಿನ ಅವರೆಲ್ಲರೂ ಬೆಥಾನಿಯದಿಂದ ಜೆರುಸಲೇಮಿಗೆ ಬರುತ್ತಿದ್ದಾಗ ಯೇಸುಸ್ವಾಮಿಗೆ ಹಸಿವಾಯಿತು.


ಯೇಸು ಆ ಮರಕ್ಕೆ, “ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ,” ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು