Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:33 - ಕನ್ನಡ ಸತ್ಯವೇದವು C.L. Bible (BSI)

33 ಆದುದರಿಂದ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹೀಗಿರಲಾಗಿ ಅವರು - ನಾವು ಅರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ - ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದಕಾರಣ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದು ಉತ್ತರಿಸಿದರು. ಯೇಸು ಅವರಿಗೆ, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತಿದ್ದೇನೆಂದು ನಿಮಗೆ ಹೇಳುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದು ಅವರಿಗೆ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತಸೆ ಮನುನ್ ತೆನಿ ಜೆಜುಕ್ “ಅಮ್ಕಾ ಗೊತ್ತ್ ನಾ” ಮನುನ್ ಸಾಂಗ್ಲ್ಯಾನಿ. ತನ್ನಾ ಜೆಜುನ್ ತೆಂಕಾ “ತಸೆ ಜಾಲ್ಯಾರ್ ಮಿಯಾಬಿ ಹೆ ಸಗ್ಳೆ ಕಸ್ಲ್ಯಾ ಅದಿಕಾರ್‍ಯಾನ್ ಕರುಕ್ ಲಾಗ್ಲಾ ಮನುನ್ ತುಮ್ಕಾ ಸಾಂಗಿನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:33
26 ತಿಳಿವುಗಳ ಹೋಲಿಕೆ  

ಹೌದು, ಮೋಶೆ ಬರೆದುದನ್ನು ಓದುವಾಗಲೆಲ್ಲಾ ಅವರ ಮನಸ್ಸು ಇಂದಿಗೂ ಅದೇ ಮುಸುಕಿನಿಂದ ಮುಚ್ಚಿದೆ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಅವನು, “ನಿಮಗೆ ಆಗಲೇ ಹೇಳಿದ್ದೇನೆ. ಆದರೆ ನೀವು ನಂಬುವುದಿಲ್ಲ. ಅದನ್ನೇ ಏಕೆ ಮತ್ತೆ ಮತ್ತೆ ಕೇಳುತ್ತೀರಿ? ಅವನ ಶಿಷ್ಯರಾಗಲು ನಿಮಗೂ ಮನಸ್ಸಿದೆಯೇ” ಎಂದನು.


ಆಗ ಯೇಸು, “ಇಸ್ರಯೇಲಿನ ಹೆಸರಾಂತ ಬೋಧಕನಾದ ನಿನಗೇ ಇದು ಅರ್ಥವಾಗಲಿಲ್ಲವೇ?


ಬಳಿಕ ಬಂದು, “ನಮಗೆ ಗೊತ್ತಿಲ್ಲ,” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು, “ಹಾಗಾದರೆ, ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.


ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ನಿರರ್ಥಕಗೊಳಿಸುತ್ತಾನೆ ವಕ್ರಿಗಳ ತಂತ್ರೋಪಾಯಗಳನು ಸಿಕ್ಕಿಸಿಬಿಡುತ್ತಾನೆ ಅವರವರ ಯೋಜನೆಗಳಲ್ಲೆ ಜ್ಞಾನಿಗಳನು.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


‘ಮನುಷ್ಯರಿಂದ ಬಂದಿತು’ ಎಂದು ಹೇಳೋಣ ಎಂದರೆ ಅದೂ ಆಗದು,” ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು.


ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು