Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:9 - ಕನ್ನಡ ಸತ್ಯವೇದವು C.L. Bible (BSI)

9 ಯೇಸುವಿನ ಹಿಂದೆಯೂ ಮುಂದೆಯೂ ಇದ್ದವರು - “ಜಯವಾಗಲಿ ! ಸರ್ವೇಶ್ವರನ ನಾಮದಲ್ಲಿ ಬರುವವರಿಗೆ ಮಂಗಳವಾಗಲಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನ ಹಿಂದೆಯೂ ಮುಂದೆಯೂ ಹೋಗುತ್ತಿದ್ದವರು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ, “‘ಆತನನ್ನು ಕೊಂಡಾಡಿರಿ! ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗುತ್ತಾ, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜೆಜುಚ್ಯಾ ಫಿಡೆ ಹೊತ್ತಿ ಅನಿ ಫಾಟ್ನಾ ಯೆತಲಿ ಲೊಕಾ ಜೊರಾನಿ ಬೊಬ್ ಮಾರುನ್ಗೆತ್ “ದೆವಾಕ್ ಮಹಿಮಾ! ಧನ್ಯಾಚ್ಯಾ ನಾವಾನ್ ಯೆತಾ ತೆಕಾ ದೆವ್ ಆಶಿರ್ವಾದ್ ದಿಂವ್ದಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:9
7 ತಿಳಿವುಗಳ ಹೋಲಿಕೆ  

ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ಏಕೆಂದರೆ, ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು!’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಮತ್ತೆ ಕಾಣಲಾರಿರಿ ಎಂಬುದು ನಿಶ್ಚಯ.”


ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.


ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇನ್ನೂ ಕೆಲವರು ತೋಟಗಳಿಂದ ಮರದ ರೆಂಬೆಗಳನ್ನು ಕಡಿದು, ಎಲೆಗಳನ್ನು ಹರಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು