Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:13 - ಕನ್ನಡ ಸತ್ಯವೇದವು C.L. Bible (BSI)

13 ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಅವರು ಆತನನ್ನು ಮಾತಿನಲ್ಲಿ ಹಿಡಿಯುವದಕ್ಕೆ ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅನಂತರ ಯೆಹೂದ್ಯನಾಯಕರು ಕೆಲವು ಫರಿಸಾಯರನ್ನು ಹಾಗೂ ಹೆರೋದ್ಯರ ಗುಂಪಿನಿಂದ ಕೆಲವರನ್ನು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಮೇಲೆ ಅವರು ಯೇಸುವನ್ನು ಅವರ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಅವರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜುಕ್ ತೆಚ್ಯಾಚ್ ಗೊಸ್ಟಿಯಾತ್ನಿ ಗೊಂದ್ಳುನ್ ಘಾಲುವಾ ಮನ್ತಲ್ಯಾ ಉದ್ದೆಶಾನ್ ಥೊಡಿ ಫಾರಿಜೆವಾ ಅನಿ ಥೊಡಿ ಹೆರೊದಾಚ್ಯಾ ಪಕ್ಷಾಚಿ ಲೊಕಾ ಜೆಜುಕ್ಡೆ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:13
12 ತಿಳಿವುಗಳ ಹೋಲಿಕೆ  

ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.


ಫರಿಸಾಯರು ಅಲ್ಲಿಂದ ಹೊರಗೆಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು