Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:15 - ಕನ್ನಡ ಸತ್ಯವೇದವು C.L. Bible (BSI)

15 ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೊಡಬೇಕೋ ಬೇಡವೋ ಎಂದು ಆತನನ್ನು ಕೇಳಿದರು. ಆತನು ಅವರ ಕಪಟವನ್ನು ತಿಳಿದು - ನನ್ನನ್ನು ಯಾಕೆ ಪರೀಕ್ಷೆ ಮಾಡುತ್ತೀರಿ? ನನಗೆ ಒಂದು ಹಣವನ್ನು ತಂದು ತೋರಿಸಿರಿ ಅನ್ನಲು ಅವರು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆಜುನ್ ತೆಂಚೊ ಘಾತ್ ಕಳ್ವುನ್ ಘೆಟ್ಲ್ಯಾನ್ ಅನಿ “ತುಮಿ ಮಾಕಾಚ್ ಗೊಂದ್ಳುನ್ ಘಾಲುವಾ ಮನುನ್ ಕಶ್ಯಾಕ್ ಯವ್ಜುಕ್ ಲಾಗ್ಲ್ಯಾಸಿ? ಎಕ್ ಚಾಂದಿಚಿ ಪೈಸ್ಯಾಚಿ ಗಾಲಿ ಮಾಜ್ಯಾಕ್ಡೆ ದಿವಾ ಬಗುವಾ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:15
14 ತಿಳಿವುಗಳ ಹೋಲಿಕೆ  

ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಅವರ ಪೈಕಿ ಕೆಲವರು ಪ್ರಭುವನ್ನು ಶೋಧಿಸಿದರು. ಪರಿಣಾಮವಾಗಿ ಸರ್ಪಗಳಿಂದ ನಾಶವಾದರು. ಅವರಂತೆ ಪ್ರಭುವನ್ನು ಶೋಧನೆಮಾಡುವುದು ನಮಗೆ ಬೇಡ.


ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಅವರ ಕುಯುಕ್ತಿಯನ್ನು ಅರಿತುಕೊಂಡ ಯೇಸು,


ಫರಿಸಾಯರಲ್ಲಿ ಕೆಲವರು, ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೇ?” ಎಂದು ಕೇಳಿದರು.


ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?


“ನರಪುತ್ರನೇ, ನೀನು ಇಸ್ರಯೇಲ್ ವಂಶದವರಿಗೆ ಈ ಸಾಮತಿಯನ್ನು ಒಗಟಾಗಿ ಹೇಳು -


ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ.


ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.


ಅವರೊಂದು ನಾಣ್ಯವನ್ನು ತಂದರು. “ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಯೇಸು ಕೇಳಿದರು. ಅದಕ್ಕೆ ಅವರು, “ಅವು ರೋಮ್‍ಚಕ್ರವರ್ತಿಯವು,” ಎಂದರು.


ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು