Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:16 - ಕನ್ನಡ ಸತ್ಯವೇದವು C.L. Bible (BSI)

16 ಅವರೊಂದು ನಾಣ್ಯವನ್ನು ತಂದರು. “ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಯೇಸು ಕೇಳಿದರು. ಅದಕ್ಕೆ ಅವರು, “ಅವು ರೋಮ್‍ಚಕ್ರವರ್ತಿಯವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಆತನು - ಈ ತಲೆಯೂ ಮುದ್ರೆಯೂ ಯಾರದು ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರು ಆತನಿಗೆ ಒಂದು ನಾಣ್ಯವನ್ನು ಕೊಟ್ಟರು. ಯೇಸು ಅವರಿಗೆ, “ನಾಣ್ಯದ ಮೇಲೆ ಯಾರ ಚಿತ್ರವಿದೆ? ಮತ್ತು ಅದರ ಮೇಲೆ ಯಾರ ಹೆಸರಿದೆ?” ಎಂದು ಕೇಳಿದನು. ಅವರು, “ಇದು ಸೀಸರನ ಚಿತ್ರ ಮತ್ತು ಸೀಸರನ ಹೆಸರು” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಅದನ್ನು ತಂದಾಗ ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಮೆಲ್ಬರಹವು ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ತೆನಿ ಎಕ್ ಚಾಂದಿಚಿ ಪಯ್ಸ್ಯಾಚಿ ಗಾಲಿ ತೆಕಾ ದಿಲ್ಯಾನಿ, ತನ್ನಾ ಜೆಜುನ್ “ಹ್ಯಾ ಚಾಂದಿಚ್ಯಾ ಪಯ್ಸ್ಯಾಚ್ಯಾ ವರ್‍ತಿ ಕೊನಾಚೆ ತೊಂಡ್ ಹಾಯ್ ಅನಿ ಕೊನಾಚೆ ನಾವ್ ಲಿವಲ್ಲೆ ಹಾಯ್?” ಮನುನ್ ತೆಂಕಾ ಇಚಾರ್‍ಲ್ಯಾನ್. ತೆಕಾ ತೆನಿ ಚಕ್ರವರ್ತಿಚೆ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:16
6 ತಿಳಿವುಗಳ ಹೋಲಿಕೆ  

ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.


ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು