Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:31 - ಕನ್ನಡ ಸತ್ಯವೇದವು C.L. Bible (BSI)

31 “ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ ಎರಡನೆಯ ಆಜ್ಞೆ; ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ‘ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,’ ಎಂಬುದು ಅದರಂತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿಗಿಂತ ಹೆಚ್ಚಿನ ಆಜ್ಞೆಯು ಮತ್ತೊಂದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಅನಿ ದೊನ್ವೆಚೊ ಮಹತ್ವಾಚೊ ಖಾಯ್ದೊ ಮಟ್ಲ್ಯಾರ್ “ತಿಯಾ ತುಜೊಚ್ ಕಸೊ ಪ್ರೆಮ್ ಕರ್‍ತೆ, ತಸೆಚ್ ದುಸ್ರ್ಯಾಂಚೊ ಪ್ರೆಮ್ ಕರುಚೊ. ಹ್ಯಾ ದೊನಿಚ್ಯಾನ್ಕಿ ಮೊಟೊ ಖಾಯ್ದೊ ಅನಿ ಖಲೊಬಿ ನಾ,” ಮನುನ್ ಉತ್ತರ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:31
15 ತಿಳಿವುಗಳ ಹೋಲಿಕೆ  

ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’


ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.


“ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”


“ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.


ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು