Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:35 - ಕನ್ನಡ ಸತ್ಯವೇದವು C.L. Bible (BSI)

35 ಬಳಿಕ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಉಪದೇಶಮಾಡುತ್ತಾ ಈ ಪ್ರಶ್ನೆ ಎತ್ತಿದರು: “ಅಭಿಷಿಕ್ತನಾದ ಲೋಕೋದ್ಧಾರಕನನ್ನು ಧರ್ಮಶಾಸ್ತ್ರಿಗಳು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ! ಅದು ಹೇಗಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೇಸು ದೇವಾಲಯದಲ್ಲಿ ಉಪದೇಶ ಮಾಡುತ್ತಿರಲಾಗಿ ಪ್ರಶ್ನೆಮಾಡಿ - ಶಾಸ್ತ್ರಿಗಳು ಬರಬೇಕಾದ ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೇಸು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಆತನು ಅವರಿಗೆ, “ಕ್ರಿಸ್ತನು ದಾವೀದನ ಮಗನೆಂದು ಧರ್ಮೋಪದೇಶಕರು ಹೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ, “ಕ್ರಿಸ್ತನು ದಾವೀದನ ಪುತ್ರನು ಎಂದು ನಿಯಮ ಬೋಧಕರು ಹೇಳುತ್ತಿರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜೆಜುನ್ ಗುಡಿತ್ ಶಿಕ್ವುನ್ಗೆತ್ ಹ್ಯೊ ಪ್ರಸ್ನೊ ಇಚಾರ್‍ಲ್ಯಾನ್ “ಖಾಯ್ದೆ ಸಿಕ್ವುತಲೆ ಕ್ರಿಸ್ತ್ ದಾವಿದಾಚೊ ಲೆಕ್ ಮನುನ್ ಸಾಂಗ್ತ್ಟ್ಯಾತ್. ತೆ ಕಶೆ ಹೊತಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:35
12 ತಿಳಿವುಗಳ ಹೋಲಿಕೆ  

ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.


ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.


‘ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ’ ಎಂದು ಪವಿತ್ರಗ್ರಂಥವೇ ಹೇಳಿದೆಯಲ್ಲವೆ?” ಎಂದು ವಾದಿಸಿದರು.


ಯೇಸುಸ್ವಾಮಿ ಹಗಲೆಲ್ಲಾ ಮಹಾದೇವಾಲಯದಲ್ಲಿ ಬೋಧಿಸುತ್ತಿದ್ದರು. ರಾತ್ರಿಯಲ್ಲಿ ಪಟ್ಟಣದಿಂದ ಹೊರಟು, ಓಲಿವ್ ತೋಪಿನ ಗುಡ್ಡದಲ್ಲಿ ತಂಗುತ್ತಿದ್ದರು.


ಒಂದು ದಿನ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಜನರಿಗೆ ಬೋಧನೆಮಾಡುತ್ತಾ ಶುಭಸಂದೇಶವನ್ನು ಪ್ರಕಟಿಸುತ್ತಾ ಇದ್ದರು. ಆಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅಲ್ಲಿಗೆ ಬಂದು,


ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.


ಯೇಸು ಮತ್ತು ಶಿಷ್ಯರು ಪುನಃ ಜೆರುಸಲೇಮಿಗೆ ಬಂದರು. ಯೇಸು ದೇವಾಲಯದ ಆವರಣದಲ್ಲಿ ತಿರುಗಾಡುತ್ತಿದ್ದಾಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅವರ ಬಳಿಗೆ ಬಂದು,


ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.


ಅಲ್ಲಿಂದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆಕಡೆಯಿದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. ಅಲ್ಲಿಯೂ ಜನರು ಗುಂಪುಗುಂಪಾಗಿ ಅವರ ಬಳಿಗೆ ಬಂದರು. ಯೇಸು ಅವರಿಗೂ ಉಪದೇಶಮಾಡಿದರು.


ಆದರೆ ಪವಿತ್ರಗ್ರಂಥದಲ್ಲಿ ಬರೆದಿರುವುದು ನೆರವೇರುವಂತೆ ಇದೆಲ್ಲಾ ಸಂಭವಿಸಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು