Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:43 - ಕನ್ನಡ ಸತ್ಯವೇದವು C.L. Bible (BSI)

43 ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ನಿಮಗೆ ನಿಜವಾಗಿ ಹೇಳುತ್ತೇನೆ, ಬೊಕ್ಕಸದಲ್ಲಿ ಹಾಕಿದವರೆಲ್ಲರಲ್ಲಿ ಈ ಬಡ ವಿಧವೆ ಹೆಚ್ಚು ಹಾಕಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಯೇಸು ತನ್ನ ಶಿಷ್ಯರನ್ನು ಬಳಿಗೆ ಕರೆದು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಕಾಣಿಕೆ ಹಾಕಿದವರೆಲ್ಲರಲ್ಲಿ ಈ ಬಡವಿಧವೆ ಹೆಚ್ಚು ಹಾಕಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಜಗ್ಗೊಳ್ ಬಲ್ವುನ್ “ಬಗಾ, ಹ್ಯಾ ಕಾನಿಕಾಚ್ಯಾ ಡಬ್ಬ್ಯಾತ್ ಕಾನಿಕ್ ಘಾಟಲ್ಲ್ಯಾ ಎವ್ಡ್ಯಾ ಸಗ್ಳ್ಯಾ ಲೊಕಾಂಚಾನ್ಕಿ ಜಾಸ್ತಿ ಹ್ಯಾ ಗರಿಬ್ ಬಾಯ್ಕೊಮನ್ಸಿನ್ ಘಾಟ್ಲಿನಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:43
9 ತಿಳಿವುಗಳ ಹೋಲಿಕೆ  

ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.


ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.


ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಅಷ್ಟರಲ್ಲಿ ಬಡ ವಿಧವೆ ಒಬ್ಬಳು ಅಲ್ಲಿಗೆ ಬಂದಳು. ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.


ಇವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡುಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು,” ಎಂದರು.


ಮಹಾದೇವಾಲಯದೊಳಗೆ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಕೋಣೆಯಲ್ಲಿ ಯೇಸು ಮಾತನಾಡುತ್ತಾ ಹೇಳಿದ ಮಾತುಗಳಿವು. ಅವರ ಗಳಿಗೆ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು