ಮಾರ್ಕ 12:44 - ಕನ್ನಡ ಸತ್ಯವೇದವು C.L. Bible (BSI)44 ಇವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡುಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಹೇಗೆಂದರೆ ಎಲ್ಲರು ತಮಗೆ ಸಾಕಾಗಿ ವಿುಕ್ಕದ್ದರಲ್ಲಿ ಹಾಕಿದರು; ಈಕೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಹಾಕಿದಳು, ತನ್ನ ಜೀವನವನ್ನೇ ಕೊಟ್ಟುಬಿಟ್ಟಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಉಳಿದವರಾದರೊ ತಮಗೆ ಸಾಕಾಗಿ ಉಳಿದದ್ದರಲ್ಲಿ ಸ್ವಲ್ಪ ಹಾಕಿದರು. ಈಕೆಯಾದರೊ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲ ಕೊಟ್ಟುಬಿಟ್ಟಳು. ಈಕೆಗೆ ಆ ಹಣದ ಅಗತ್ಯವಿತ್ತು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದುದನ್ನು ಹಾಕಿದ್ದಾಳೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಕಶ್ಯಾಕ್ ಮಟ್ಲ್ಯಾರ್ ಸಗ್ಳ್ಯಾನಿ ಅಪ್ನಾಚ್ಯಾ ಸಾವ್ಕಾರ್ಕಿತ್ ಫಿರೆಹೊವ್ನ್ ಹುರಲ್ಲೆ ಉಲ್ಲೆಸೆ ಘಾಟ್ಲ್ಯಾನಿ, ಖರೆ ಹ್ಯಾ ಗರಿಬ್ ಬಾಯ್ಕೊಮನ್ಸಿನ್ ಅಪ್ನಾಕ್ಡೆ ಅಪ್ನಾಚ್ಯಾ ಜಿವನಾ ಸಾಟ್ನಿ ಮನುನ್ ಹೊತ್ತೆ ದೊನುಚ್ ದೊನ್ ಪೈಸೆಬಿ ಅಪ್ನಾಕ್ ಥವ್ನ್ ಘೆಯ್ನಸ್ತಾನಾ ಘಾಟ್ಲಿನ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |