Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:7 - ಕನ್ನಡ ಸತ್ಯವೇದವು C.L. Bible (BSI)

7 ಆದರೆ ಆ ಗೇಣಿದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಹೂಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಆ ಒಕ್ಕಲಿಗರು - ಇವನೇ ಬಾಧ್ಯಸ್ಥನು; ಬನ್ನಿ, ಇವನನ್ನು ಕೊಂದುಹಾಕೋಣ; ಆಗ ಸ್ವಾಸ್ತ್ಯ ನಮ್ಮದಾಗುವದು ಎಂದು ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಆದರೆ ರೈತರು ಒಬ್ಬರಿಗೊಬ್ಬರು, ‘ಇವನು ಯಜಮಾನನ ಮಗನು. ಈ ದ್ರಾಕ್ಷಿತೋಟದ ಹಕ್ಕುದಾರ. ನಾವು ಇವನನ್ನು ಕೊಂದರೆ, ದ್ರಾಕ್ಷಿತೋಟ ನಮ್ಮದಾಗುತ್ತದೆ’ ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಆದರೆ ಆ ರೈತರು, ‘ಇವನೇ ಬಾಧ್ಯಸ್ಥನು, ಬನ್ನಿರಿ, ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ತ್ಯಾ ಗುತ್ಕೆ ಘೆಟಲ್ಲ್ಯಾನಿ ತೆಕಾ ಬಗುನ್,“ಹ್ಯೊ ಸಾವ್ಕಾರಾಚೊ ಲೆಕ್, ಹ್ಯಾ ಅಸ್ತಿಚೊ ವಾರಿಸ್ದಾರ್, ಹೆಕಾ ಜಿವಾನಿ ಮಾರುನ್ ಟಾಕುವಾ, ತನ್ನಾ ಹಿ ಆಸ್ತಿ ಅಮ್ಕಾಚ್ ಹೊತಾ” ಮನುನ್ ಬೊಲುನ್ ಘೆವ್ನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:7
18 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ, ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.


ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದುಮಗನೊಬ್ಬನೇ, “ನನ್ನ ಮಗನಿಗಾದರೂ ಅವರು ಮರ್ಯಾದೆಕೊಟ್ಟಾರು,” ಎಂದು ಭಾವಿಸಿ, ಕಟ್ಟಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ.


ಅವನನ್ನು ಹಿಡಿದು, ಕೊಂದುಹಾಕಿ ತೋಟದ ಆಚೆಗೆ ಎಸೆದುಬಿಟ್ಟರು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು