Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:19 - ಕನ್ನಡ ಸತ್ಯವೇದವು C.L. Bible (BSI)

19 ಆಗ ಬರಲಿರುವ ಸಂಕಷ್ಟಗಳು ದೈವಸೃಷ್ಟಿಯ ಆದಿಯಿಂದ ಇರಲಿಲ್ಲ. ಇನ್ನು ಮುಂದಕ್ಕೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಏಕೆಂದರೆ ಆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಈ ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆ ದಿವಸಗಳಲ್ಲಿ ಮಹಾ ಸಂಕಟವಿರುವುದು, ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ಸಮಯದವರೆಗೂ ಅಂಥ ಸಂಕಟವು ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್ ಹ್ಯಾ ದಿಸಾತ್ನಿ ಹೊತಲೊ ಸಂಕಟ್ ಎವ್ಡೊ ಭಯಂಕರ್ ಮಟ್ಲ್ಯಾರ್, ದೆವಾನ್ ಹಿ ಸಗ್ಳಿ ದುನಿಯಾ ರಚಲ್ಲ್ಯಾಕ್ನಾ ಆಜ್ ಪತರ್ ತಸ್ಲೊ ಸಂಕಟ್ ಹ್ಯಾ ದುನಿಯಾನ್ ಬಗುಕ್ನಾ ಅನಿ ಫಿಡೆ ಕನ್ನಾಚ್ ಅಸ್ಲೊ ಸಂಕಟಾಚೊ ಎಳ್ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:19
17 ತಿಳಿವುಗಳ ಹೋಲಿಕೆ  

“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಆದರೆ ಸೃಷ್ಟಿಯ ಆರಂಭದಿಂದಲೇ ‘ದೇವರು ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದ್ದಾರೆ.


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು.


“ದೇವರು ಮಾನವರನ್ನು ಸೃಷ್ಟಿಸಿ ಭೂಮಿಯ ಮೇಲಿರಿಸಿದ ದಿನ ಮೊದಲ್ಗೊಂಡು ಇಂದಿನವರೆಗೆ, ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೆ, ಅಂಥ ಅದ್ಭುತಕಾರ್ಯ ನಡೆದದ್ದುಂಟೇ? ಅಂಥ ಸುದ್ದಿಯನ್ನಾದರೂ ಕೇಳಿದ್ದುಂಟೇ? ನೀವೇ ವಿಚಾರಿಸಿಕೊಳ್ಳಿ.


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ಈ ಸಂಕಷ್ಟಗಳೆಲ್ಲಾ ಚಳಿಗಾಲದಲ್ಲಿ ಸಂಭವಿಸದಂತೆ ಪ್ರಾರ್ಥಿಸಿರಿ.


ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು