Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:31 - ಕನ್ನಡ ಸತ್ಯವೇದವು C.L. Bible (BSI)

31 ಭೂಮ್ಯಾಕಾಶಗಳು ಗತಿಸಿಹೋಗುವುವು, ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಭೂಮ್ಯಾಕಾಶಗಳು ನಾಶವಾಗುತ್ತವೆ. ಆದರೆ ನಾನು ಹೇಳಿದ ಮಾತುಗಳು ಎಂದೆಂದಿಗೂ ನಾಶವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜಮಿನ್ ಅನಿ ಮಳಬ್ ನಾಸ್ ಹೊವ್ನ್ ಜಾಯ್ಲ್, ಖರೆ ಮಿಯಾ ಸಾಂಗಲ್ಲ್ಯಾ ಗೊಸ್ಟಿಯಾ ನಾಸ್ ಹೊಯ್‍ನ್ಯಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:31
18 ತಿಳಿವುಗಳ ಹೋಲಿಕೆ  

ಒಣಗಿ ಹೋಗುವುದಾ ಹುಲ್ಲು, ಬಾಡಿಹೋಗುವುದಾ ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು.”


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಇವೆಲ್ಲವು ಸಂಭವಿಸುವುದಕ್ಕೆ ಮುಂಚೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ.


“ಆ ದಿನವಾಗಲಿ, ಆ ಗಳಿಗೆಯಾಗಲಿ, ಯಾವಾಗ ಬರುವುದೆಂದು ಪಿತನ ಹೊರತು ಮತ್ತಾರೂ ಅರಿಯರು. ಸ್ವರ್ಗದಲ್ಲಿರುವ ದೂತರೇ ಆಗಲಿ, ಪುತ್ರನೇ ಆಗಲಿ, ಅದನ್ನು ಅರಿಯರು.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಎಂಬುದಾಗಿ ಯೇಹುವಿಗೆ ಸರ್ವೇಶ್ವರ ಮುಂತಿಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು