Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:6 - ಕನ್ನಡ ಸತ್ಯವೇದವು C.L. Bible (BSI)

6 ಅನೇಕರು ನನ್ನ ಹೆಸರನ್ನು ಇಟ್ಟುಕೊಂಡು ಬಂದು, ‘ನಾನೇ ಕ್ರಿಸ್ತ’, ‘ನಾನೇ ಕ್ರಿಸ್ತ’ ಎನ್ನುತ್ತಾ ಎಷ್ಟೋ ಜನರನ್ನು ತಪ್ಪುದಾರಿಗೆ ಎಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು - ನಾನು ಕ್ರಿಸ್ತನು, ನಾನು ಕ್ರಿಸ್ತನು ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅನೇಕ ಜನರು ಬಂದು, ‘ನಾನೇ ಕ್ರಿಸ್ತನು; ನಾನೇ ಕ್ರಿಸ್ತನು’ ಎನ್ನುತ್ತಾ ಅನೇಕ ಜನರನ್ನು ಮೋಸಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಲೈ ಲೊಕಾ ಯೆವ್ನ್ ಮಾಜ್ಯಾ ವಿಶಯಾತ್ ಬೊಲುನ್, “ಮಿಯಾಚ್ ‘ಕ್ರಿಸ್ತ್’ ಮನುನ್ ಸಾಂಗುನ್ ಲೈ ಲೊಕಾಕ್ನಿ ಪಸ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:6
13 ತಿಳಿವುಗಳ ಹೋಲಿಕೆ  

ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


ನಾನು ಬಂದಿರುವುದು ಪಿತನ ಹೆಸರಿನಲ್ಲೇ. ಆದರೂ ನೀವು ನನ್ನನ್ನು ಬರಮಾಡಿಕೊಳ್ಳುವುದಿಲ್ಲ. ಬೇರೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದನೆಂದರೆ ಅಂಥವನನ್ನು ನೀವು ಬರಮಾಡಿಕೊಳ್ಳುತ್ತೀರಿ.


ಅನೇಕ ಸುಳ್ಳುಪ್ರವಾದಿಗಳು ತಲೆಯೆತ್ತಿಕೊಂಡು ಎಷ್ಟೋಮಂದಿಯನ್ನು ವಂಚಿಸುವರು.


ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.


ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ಅದಕ್ಕೆ ಯೇಸು ಹೀಗೆಂದರು: “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ.


ಇದಲ್ಲದೆ, ರಣಕಹಳೆಗಳನ್ನೂ ಸಮರಸುದ್ದಿಗಳನ್ನೂ ಕೇಳುವಿರಿ. ಆಗ ನೀವು ಕಳವಳಪಡಬೇಡಿ. ಇವೆಲ್ಲವೂ ಸಂಭವಿಸಲೇಬೇಕು. ಆದರೂ ಇದಿನ್ನೂ ಅಂತ್ಯಕಾಲವಲ್ಲ;


ಎಂದೇ ಯೇಸು ಮತ್ತೆ ಇಂತೆಂದರು: “ನರಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು