Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:11 - ಕನ್ನಡ ಸತ್ಯವೇದವು C.L. Bible (BSI)

11 ಇದರಿಂದ ಆ ಯಾಜಕರಿಗೆ ಅತ್ಯಾನಂದವಾಯಿತು. ಅವನಿಗೆ ಹಣಕೊಡುವುದಾಗಿ ಅವರು ಮಾತುಕೊಟ್ಟರು. ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಕೇಳಿ ಸಂತೋಷಪಟ್ಟು - ನಿನಗೆ ಹಣಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆ ಎಂದು ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುವುದಾಗಿ ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭ ಹುಡುಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ಸಾಂಗಟಲ್ಲೆ ಆಯ್ಕುನ್, ತೆನಿ ಲೈ ಕುಶಿ ಹೊಲೆ ಅನಿ ತುಕಾ ಪೈಸೆ ದಿತಾಂವ್ ಮನುನ್ ಸಾಂಗ್ಲ್ಯಾನಿ, ತಸೆ ಮನುನ್ ಜೆಜುಕ್ ಧರುನ್ ದಿತಲೊ ಬರೊ ಅವ್ಕಾಸ್ ತೊ ಹುಡ್ಕುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:11
14 ತಿಳಿವುಗಳ ಹೋಲಿಕೆ  

ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


“ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.


“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


ಆಗ ಎಲೀಷನು, “ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇಮರದ ತೋಪುಗಳು, ದ್ರಾಕ್ಷೀತೋಟಗಳು, ಕುರಿದನಗಳು, ಗಂಡಾಳು, ಹೆಣ್ಣಾಳುಗಳು, ಇವನ್ನು ಸಂಪಾದಿಸುವುದಕ್ಕೆ ಇದು ಸಮಯವೇ?


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಇದಾದ ಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಇಸ್ಕರಿಯೋತಿನ ಯೂದ ಎಂಬಾತ ಮುಖ್ಯಯಾಜಕರ ಬಳಿಗೆ ಹೋದನು.


ಇದಾದಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಯೇಸುಸ್ವಾಮಿಯನ್ನು ಹಿಡಿದುಕೊಡುವ ದುರುದ್ದೇಶದಿಂದ ಮುಖ್ಯಯಾಜಕರ ಬಳಿಗೆ ಹೋದನು.


ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಅಂದರೆ, ಪಾಸ್ಕಹಬ್ಬದ ಕುರಿಮರಿಯನ್ನು ಕೊಯ್ಯುವ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.


ಅಷ್ಟರಲ್ಲಿ ಯೇಸುವಿನ ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಸೈತಾನನಿಗೆ ವಶನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು