Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:15 - ಕನ್ನಡ ಸತ್ಯವೇದವು C.L. Bible (BSI)

15 ಅವನು ಮೇಲುಪ್ಪರಿಗೆಯಲ್ಲಿ ಸಿದ್ಧವಾಗಿರುವ ಹಾಗೂ ಸುಸಜ್ಜಿತವಾದ ದೊಡ್ಡ ಕೊಠಡಿಯನ್ನು ತೋರಿಸುವನು. ಅಲ್ಲಿ ನಮಗೆ ಊಟ ಸಿದ್ಧಮಾಡಿರಿ,” ಎಂದು ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ತಕ್ಕ ಸಾಮಾನೆಲ್ಲಾ ಸಿದ್ಧವಾಗಿ ಇಟ್ಟಿರುವ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಎಂದು ಹೇಳಿ ಅವರನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಯಜಮಾನನು ಮೇಲಂತಸ್ತಿನಲ್ಲಿ ಸಿದ್ಧವಾಗಿರುವ ಒಂದು ದೊಡ್ಡ ಕೋಣೆಯನ್ನು ತೋರಿಸುತ್ತಾನೆ. ಅಲ್ಲಿ ನಮಗಾಗಿ ಊಟವನ್ನು ಸಿದ್ಧಪಡಿಸಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಸಜ್ಜುಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಸಿದ್ಧಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ತೊ ವಡಿಲ್ ತುಮ್ಕಾ ಮ್ಹಾಳ್ಗಿ ವರ್‍ತಿ ಹೊತ್ತಿ ಮೊಟಿ ಖೊಲಿ ದಾಕ್ವುತಾ, “ಥೈ ಅಮ್ಕಾ ಸಗ್ಳೆ ಬರೆ ಕರುನ್ ತಯಾರ್ ಕರುನ್ ಥವಲ್ಲೆ ರ್‍ಹಾತಾ. ಥೈ ಜೆವ್ನಾಚಿ ತಯಾರಿ ಕರಾ” ಮನುನ್ ಸಾಂಗುನ್ ಧಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:15
12 ತಿಳಿವುಗಳ ಹೋಲಿಕೆ  

ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ನಾವು ಸಭೆಸೇರಿದ್ದ ಮೇಲಂತಸ್ತಿನ ಕೊಠಡಿಯಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ. ಮನುಷ್ಯರ ಅಂತರಂಗಗಳನ್ನು ಬಲ್ಲವರು ನೀವೊಬ್ಬರೇ. ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕಹಾಗೆ ಫಲವನ್ನು ಕೊಡಿ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಅವನ ಹಿಂದೆಯೇ ಹೋಗಿ, ಅವನು ಯಾವ ಮನೆಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, “ನಮ್ಮ ಗುರು, ‘ನನ್ನ ಶಿಷ್ಯರ ಜೊತೆಯಲ್ಲಿ ಪಾಸ್ಕಭೋಜನ ಮಾಡಲು ನನಗೆ ಕೊಠಡಿ ಎಲ್ಲಿ?’ ಎಂದು ಕೇಳುತ್ತಾರೆ,” ಎಂದು ವಿಚಾರಿಸಿರಿ.


ಅವರು ಪಟ್ಟಣಕ್ಕೆ ಹೋಗಿ, ಯೇಸು ತಮಗೆ ಹೇಳಿದ ಪ್ರಕಾರ ಎಲ್ಲಾ ವ್ಯವಸ್ಥಿತವಾಗಿರುವುದನ್ನು ಕಂಡು, ಪಾಸ್ಕಭೋಜನವನ್ನು ತಯಾರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು