Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:2 - ಕನ್ನಡ ಸತ್ಯವೇದವು C.L. Bible (BSI)

2 ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು; ಮಾಡಿದರೆ, ಜನರು ದಂಗೆ ಎದ್ದಾರು,’ ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕಂದರೆ - ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಆದರೆ ಹಬ್ಬದ ಸಮಯದಲ್ಲಿ ನಾವು ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಜನರು ಕೋಪಗೊಂಡು, ಗಲಭೆ ಎಬ್ಬಿಸುವ ಸಾಧ್ಯತೆಯಿದೆ” ಎಂದು ಅವರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಅವರು, “ಜನರು ದಂಗೆ ಎದ್ದಾರು, ಹಬ್ಬದಲ್ಲಿ ಬೇಡ,” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಾನಾ “ಅತ್ತಾ ಸನ್ ತೊಂಡಾರ್ ಯೆಲೊ, ಲೊಕಾನಿ ಚವ್ತಾಳುನ್ ಖೈ ತರ್ ಧಾಂದಲ್ ಉಟ್ವುತಿಲ್” ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:2
13 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.


ಇದನ್ನು ಕೇಳಿ ನೆರೆದಿದ್ದವರಲ್ಲಿ ಕೆಲವರು, “ಬರಬೇಕಾಗಿದ್ದ ಪ್ರವಾದಿ ಈತನೇ ಸರಿ,” ಎಂದರು.


ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.


‘ಮನುಷ್ಯರಿಂದ ಬಂದಿತು’ ಎಂದು ಹೇಳೋಣ ಎಂದರೆ ಅದೂ ಆಗದು,” ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.


ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.


ಯೌವನದಿಂದಲೆ ನೊಗ ಹೊತ್ತರೆ ಮಾನವನಿಗೆ ಅದು ಹಿತಕರ.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


“ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.


ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.


ಯೇಸುಸ್ವಾಮಿ ಬೆಥಾನಿಯದಲ್ಲಿ, ಕುಷ್ಠರೋಗಿ ಸಿಮೋನನ ಮನೆಯಲ್ಲಿ ಇದ್ದರು. ಅಲ್ಲಿ ಊಟಕ್ಕೆ ಕುಳಿತಿದ್ದಾಗ, ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಜಟಮಾಂಸಿ ಸುಗಂಧತೈಲವನ್ನು ತೆಗೆದುಕೊಂಡು ಬಂದು, ಭರಣಿಯನ್ನು ಒಡೆದು, ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.


ಪಾಸ್ಕಮಹೋತ್ಸವವು ಸಮೀಪಿಸುತ್ತಿತ್ತು. ಅದು ಹುಳಿರಹಿತ ರೊಟ್ಟಿಯನ್ನು ಭುಜಿಸುವ ಹಬ್ಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು