Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:21 - ಕನ್ನಡ ಸತ್ಯವೇದವು C.L. Bible (BSI)

21 ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ಹೊರಟುಹೋಗುತ್ತಾನೆ, ನಿಜ. ಆದರೆ ನರಪುತ್ರನಿಗೆ ದ್ರೋಹ ಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮನುಷ್ಯಕುಮಾರನು ಹಿಂಸಿಸಲ್ಪಟ್ಟನು. ಪವಿತ್ರ ಗ್ರಂಥದಲ್ಲಿಯೂ ಅದನ್ನು ಬರೆಯಲಾಗಿದೆ. ಆದರೆ ಮನುಷ್ಯಕುಮಾರನನ್ನು ಕೊಲ್ಲಲು ಹಿಡಿದುಕೊಡುವ ವ್ಯಕ್ತಿಯ ಸ್ಥಿತಿ ಬಹಳ ಭೀಕರವಾಗಿರುತ್ತದೆ. ಅವನು ಹುಟ್ಟದೇ ಇದ್ದಿದ್ದರೆ ಅವನಿಗೆ ಒಳ್ಳೆಯದಾಗುತ್ತಿತ್ತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೇ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಪವಿತ್ರ್ ಪುಸ್ತಕಾತ್ ಲಿವಲ್ಲ್ಯಾ ಪರ್ಕಾರ್ ಮಾನ್ಸಾಚೊ ಲೆಕ್ ಮರುಕುಚ್ ಪಾಜೆ ಅನಿ ಮರ್ತಾ, ಖರೆ ತೆಕಾ ಘಾತ್ ಕರ್‍ತಲ್ಯಾ ಮಾನ್ಸಾಚಿ ಗತ್, ಮಿಯಾ ಕಾಯ್ ಸಾಂಗು! ತೊ ಮಾನುಸ್ ಜಲ್ಮುಕುಚ್ ನಸ್ಲ್ಯಾರ್ ತೆಕಾಚ್ ಕವ್ಡೆಕಿ ಬರೆ ಹೊತ್ತೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:21
28 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ಆದರೆ, ಈ ಪ್ರಕಾರವೇ ಆಗಬೇಕು ಎನ್ನುವ ಪವಿತ್ರಗ್ರಂಥದ ವಾಕ್ಯ ನೆರವೇರುವುದಾದರೂ ಹೇಗೆ?” ಎಂದರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.


ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ನರಪುತ್ರನೇನೋ ದೈವೇಚ್ಛೆಯ ಪ್ರಕಾರ ಹೊರಟು ಹೋಗುತ್ತಾನೆ; ಆದರೆ ಆತನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ!” ಎಂದರು.


ಆದರೆ ಪವಿತ್ರಗ್ರಂಥದಲ್ಲಿ ಬರೆದಿರುವುದು ನೆರವೇರುವಂತೆ ಇದೆಲ್ಲಾ ಸಂಭವಿಸಿದೆ,” ಎಂದರು.


ಅದಕ್ಕೆ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ರೊಟ್ಟಿಯನ್ನು ಅದ್ದುತ್ತಿರುವ ಇದೇ ಹನ್ನೆರಡುಮಂದಿಯಲ್ಲಿ ಒಬ್ಬನು ಅವನು.


ಅವರೆಲ್ಲರೂ ಊಟಮಾಡುತ್ತಿರುವಾಗ, ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ಸ್ವೀಕರಿಸಿರಿ, ಇದು ನನ್ನ ಶರೀರ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು