Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:23 - ಕನ್ನಡ ಸತ್ಯವೇದವು C.L. Bible (BSI)

23 ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟರು. ಅವರೆಲ್ಲರೂ ಅದರಿಂದ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಮೇಲೆ ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರೆಲ್ಲರೂ ಅದರಲ್ಲಿ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಾನಾ ಜೆಜುನ್ ವಾಯ್ನಾಚೆ ಆಯ್ದಾನ್ ಘೆವ್ನ್. ದೆವಾಕ್ ಧನ್ಯಾವಾದ್ ದಿವ್ನ್ ತೆ ತೆಂಕಾ ದಿಲ್ಯಾನ್, ತೆನಿ ತೆ ಫಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:23
6 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಊಟಮಾಡುತ್ತಿರುವಾಗ, ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ಸ್ವೀಕರಿಸಿರಿ, ಇದು ನನ್ನ ಶರೀರ,” ಎಂದರು.


ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಡುತ್ತಾ ಇಂತೆಂದರು: “ಇದರಲ್ಲಿ ಇರುವುದನ್ನು ಎಲ್ಲರೂ ಪಾನಮಾಡಿ;


ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?


ಒಂದು ದಿನವನ್ನು ಮಂಗಳಕರವೆಂದು ಭಾವಿಸುವವನು ಪ್ರಭುವಿಗಾಗಿಯೇ ಆ ರೀತಿ ಭಾವಿಸುತ್ತಾನೆ. ಮಾಂಸವನ್ನು ತಿನ್ನುವವನು ಪ್ರಭುವಿಗಾಗಿಯೇ ತಿನ್ನುತ್ತಾನೆ. ಹೇಗೆಂದರೆ, ತಿನ್ನುವ ಆ ಪದಾರ್ಥಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಸಸ್ಯಾಹಾರಿಯೂ ಪ್ರಭುವಿಗಾಗಿಯೇ ಮಾಂಸವನ್ನು ತಿನ್ನದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.


ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, “ಇದನ್ನು ತೆಗೆದುಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ;


ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು