Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:31 - ಕನ್ನಡ ಸತ್ಯವೇದವು C.L. Bible (BSI)

31 ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ಆವೇಶಪೂರಿತನಾಗಿ ನುಡಿದನು. ಹಾಗೆಯೇ ಉಳಿದವರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಅವನು - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲವೆಂದು ಬಹು ಖಂಡಿತವಾಗಿ ಮಾತಾಡಿದನು. ಅದರಂತೆ ಅವರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಪೇತ್ರನು ಖಚಿತವಾಗಿ, “ನಾನು ನಿನ್ನೊಂದಿಗೆ ಸಾಯಬೇಕಾದರೂ ಸರಿಯೇ, ನಿನ್ನನ್ನು ತಿಳಿದೇ ಇಲ್ಲವೆಂದು ನಾನೆಂದಿಗೂ ಹೇಳುವುದಿಲ್ಲ” ಎಂದು ಉತ್ತರಿಸಿದನು. ಉಳಿದ ಶಿಷ್ಯರು ಸಹ ಇದೇ ರೀತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದಕ್ಕೆ ಪೇತ್ರನು, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಖರೆ ಪೆದ್ರು “ಅನಿ ವಿಶ್ವಾಸಾನ್ ಮಾಕಾ ತುಜೆ ವಾಂಗ್ಡಾ ಮರ್‍ತಲೊ ಎಳ್ ಯೆಲ್ಯಾರ್ಬಿ, ತುಜಿ ಮಾಕಾ ವಳಕುಚ್ ನಾ ಮನುನ್ ಎವ್ಡೆ, ಕನ್ನಾಬಿ ಸಾಂಗಿನಾ” ಮನುನ್ ಸಾಂಗ್ತಾನಾ ಸಗ್ಳಿ ಶಿಸಾಬಿ ತಸೆಚ್ ಮನುಲಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:31
17 ತಿಳಿವುಗಳ ಹೋಲಿಕೆ  

ಪೇತ್ರನು, “ಈಗಲೇ ನಿಮ್ಮ ಹಿಂದೆಬರಲು ಏಕಾಗದು? ಪ್ರಭೂ, ನಿಮಗಾಗಿ ಪ್ರಾಣವನ್ನು ಕೊಡಲೂ ಸಿದ್ಧನಿದ್ದೇನೆ,” ಎಂದನು.


ಜನರೆಲ್ಲರು, “ಸರ್ವೇಶ್ವರ ಸ್ವಾಮಿ ಹೇಳಿದಂತೆಯೇ ನಾವು ಮಾಡುತ್ತೇವೆ,” ಎಂದು ಒಕ್ಕೊರಲಿನಿಂದ ಉತ್ತರಕೊಟ್ಟರು. ಮೋಶೆ ಸರ್ವೇಶ್ವರನ ಬಳಿಗೆ ಹೋಗಿ ಜನರ ಆ ಉತ್ತರವನ್ನು ಅರಿಕೆ ಮಾಡಿದನು.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಸರ್ವೇಶ್ವರಾ, ಮಾನವನ ಗುರಿಸಾಧನೆ ಅವನ ಸ್ವಾಧೀನದಲ್ಲಿಲ್ಲ. ಸರಿದಿಸೆಯಲ್ಲಿ ಅವನು ಹೆಜ್ಜೆಯಿಡಲಾರನೆಂದು ನಿಮಗೆ ಗೊತ್ತಿದೆಯಲ್ಲಾ.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಹಜಾಯೇಲನು ಎಲೀಷನನ್ನು, “ನಿಮ್ಮ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವುದು ಹೇಗೆ?” ಎಂದು ಕೇಳಿದನು. ಅವನು, “ನೀನು ಸಿರಿಯಾದವರ ರಾಜನಾಗುವೆಯೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,” ಎಂದನು.


ನಾನಾದರೋ ಉಲ್ಲಾಸದಿಂದಿರುವಾಗಲೂ I ನನ್ನನು ಅಲ್ಲಾಡಿಸಲಾಗದೆಂದೆ ಯಾರಿಂದಲೂ II


ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.


ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಎರಡು ಸಾರಿ ಕೂಗುವ ಮೊದಲೇ, ‘ಆತನನ್ನು ನಾನರಿಯೆ’ ಎಂದು ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ, ಇದು ಖಂಡಿತ,” ಎಂದರು.


ತರುವಾಯ ಅವರೆಲ್ಲರೂ ಗೆತ್ಸೆಮನೆ ಎಂಬ ತೋಪಿಗೆ ಬಂದರು.


ಆದರೂ ಅವರು ಅಧಿಕಾಧಿಕವಾಗಿ ಆರ್ಭಟಿಸುತ್ತಾ ಯೇಸುವನ್ನು ಶಿಲುಬೆಗೆ ಏರಿಸಲೇ ಬೇಕೆಂದು ಕೂಗಾಡಿದರು. ಕಟ್ಟಕಡೆಗೆ ಕೂಗಾಟಕ್ಕೇ ಗೆಲುವಾಯಿತು!


ಫರೋಹನು, “ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಏಕೆ ಆಶಿಸುತ್ತಿ?” ಎಂದು ಕೇಳಿದನು. ಅವನು, “ಏನೂ ಕೊರತೆಯಾಗಿಲ್ಲ; ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಉತ್ತರಕೊಟ್ಟನು. ಹದದನು ತನ್ನ ಊರಿಗೆ ಮರಳಿದನು.


ಆಗ ಯೇಸು, “ನಾನು ಕುಡಿಯುವ ಪಾತ್ರೆಯಿಂದ ನೀವೂ ಕುಡಿಯುವಿರಿ; ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು