Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:38 - ಕನ್ನಡ ಸತ್ಯವೇದವು C.L. Bible (BSI)

38 ಪ್ರಲೋಭನೆಗೆ ಒಳಗಾಗದಂತೆ ಎಚ್ಚರದಿಂದ ಇದ್ದು ಪ್ರಾರ್ಥನೆಮಾಡಿ, ಆತ್ಮಕ್ಕೇನೋ ಆಸಕ್ತಿ ಇದೆ; ಆದರೆ ದೇಹಕ್ಕೆ ಶಕ್ತಿ ಸಾಲದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನೀನು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸು. ಮನಸ್ಸೇನೋ ಸಿದ್ಧವಾಗಿದೆ, ಆದರೆ ದೇಹಕ್ಕೆ ಬಲ ಸಾಲದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತೆನಿ ತೆಂಕಾ “ತುಮಿ ಪಾಪಾತ್ ಪಡಿನಸಿ ಸರ್ಕೆ ಜಾಗಿ ರವ್ನ್ ಮಾಗ್ನಿ ಕರಾ. ಮನ್ ತಯಾರ್ ಹಾಯ್ ಹೊಯ್, ಖರೆ ಹ್ಯಾ ಶರಿರಾಕ್ ತವ್ಡಿ ಸಂಬಾಳ್ತಲಿ ತಾಕತ್ ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:38
17 ತಿಳಿವುಗಳ ಹೋಲಿಕೆ  

ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.


ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಕ್ಲುಪ್ತಸ್ಥಳಕ್ಕೆ ಬಂದಾಗ ಯೇಸು ಅವರಿಗೆ, “ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿರಿ,” ಎಂದು ಹೇಳಿ,


ಇದನ್ನು ಕಂಡು, “ನೀವು ನಿದ್ರಿಸುತ್ತೀರೇನು? ಎದ್ದು, ನೀವು ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿ,” ಎಂದರು.


ಏಕೆಂದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ಧವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ಧವಾಗಿದ್ದಾರೆ. ಇವೆರಡೂ ಒಂದಕ್ಕೊಂದು ಕಾದಾಡುವುದರಿಂದ ನಿಮ್ಮ ಬಯಕೆ ಕೈಗೂಡುವುದಿಲ್ಲ.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಅಲ್ಲಿ ಅತೀವ ದುಃಖದಿಂದ ಚಿಂತಾಕ್ರಾಂತರಾಗಿ, “ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ; ನೀವು ಇಲ್ಲೇ ಇದ್ದು ಎಚ್ಚರವಾಗಿರಿ,” ಎಂದರು.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ಅನಂತರ ಹಿಂದಿರುಗಿ ಬಂದು, ಆ ಮೂವರು ಶಿಷ್ಯರು ನಿದ್ರಿಸುತ್ತಿದ್ದುದನ್ನು ಕಂಡು, ಪೇತ್ರನಿಗೆ, “ಸಿಮೋನನೇ, ನಿದ್ದೆಮಾಡುತ್ತಿರುವಿಯೋ! ಒಂದು ಗಂಟೆಯಾದರೂ ಎಚ್ಚರವಾಗಿರಲು ನಿನಗೆ ಸಾಧ್ಯವಾಗದೆ ಹೋಯಿತೋ!


ಮರಳಿ ಹಿಂದಕ್ಕೆ ಹೋಗಿ, ಮೊದಲು ಪ್ರಾರ್ಥನೆ ಮಾಡಿದಂತೆಯೇ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು