ಮಾರ್ಕ 14:44 - ಕನ್ನಡ ಸತ್ಯವೇದವು C.L. Bible (BSI)44 ಗುರುದ್ರೋಹಿಯಾದ ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ, ಆತನೇ ಆ ವ್ಯಕ್ತಿ, ಆತನನ್ನು ಬಂಧಿಸಿ, ಭದ್ರವಾಗಿ ಕರೆದೊಯ್ಯಿರಿ,” ಎಂದು ಮೊದಲೇ ಸೂಚನೆಕೊಟ್ಟಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ - ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡುಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಯೇಸು ಯಾರೆಂಬುದನ್ನು ಜನರಿಗೆ ತೋರಿಸಲು ಯೂದನು ಒಂದು ಉಪಾಯ ಮಾಡಿದನು. ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಯೇಸು. ಅವನನ್ನು ಸೆರೆಹಿಡಿದು ಎಚ್ಚರಿಕೆಯಿಂದ ಕಾಯುತ್ತಾ ಕರೆದುಕೊಂಡು ಹೋಗಿರಿ!” ಎಂದು ಹೇಳಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು, ಆತನನ್ನು ಹಿಡಿದು, ಭದ್ರವಾಗಿ ತೆಗೆದುಕೊಂಡು ಹೋಗಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಧರುನ್ ದಿತಲ್ಯಾನ್ ತ್ಯಾ ಲೊಕಾಕ್ನಿ ಎಕ್ ಘುರ್ತ್ ದಿಲ್ಲ್ಯಾನ್, “ಮಿಯಾ ಕೊನಾಕ್ ಉಪ್ಪಾ ದಿತಾಕಿ ತೊಚ್ ತುಮ್ಕಾ ಪಾಜೆ ಹೊಲ್ಲೊ, ತೆಕಾ ತುಮಿ ಧರಾ ಅನಿ ಉಶಾರ್ಕಿನ್ ಘೆವ್ನ್ ಜಾವಾ” ಮನುನ್ ಸಾಂಗಲ್ಲ್ಯಾನ್. ಅಧ್ಯಾಯವನ್ನು ನೋಡಿ |