Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:45 - ಕನ್ನಡ ಸತ್ಯವೇದವು C.L. Bible (BSI)

45 ಅದರಂತೆಯೇ ಅವನು ಅಲ್ಲಿಗೆ ಬಂದಕೂಡಲೆ ಯೇಸುವಿನ ಹತ್ತಿರಕ್ಕೆ ನೇರವಾಗಿ ಹೋಗಿ, ‘ಗುರುದೇವಾ’, ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅಲ್ಲಿಗೆ ಬಂದ ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆದ್ದರಿಂದ ಯೂದನು ಯೇಸುವಿನ ಬಳಿಗೆ ಹೋಗಿ, “ಗುರುವೇ!” ಎಂದು ಹೇಳಿ ಯೇಸುವಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಯೆಲ್ಲ್ಯಾ ತನ್ನಾಚ್ ಜುದಾಸ್ ಜೆಜುಕ್ಡೆ ಗೆಲೊ ಅನಿ ಗುರುಜಿ! ಮಟ್ಲ್ಯಾನ್ ಅನಿ ಜೆಜುಚಿ ಉಪ್ಪಾ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:45
10 ತಿಳಿವುಗಳ ಹೋಲಿಕೆ  

ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ).


“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ಗುರುದ್ರೋಹಿಯಾದ ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ, ಆತನೇ ಆ ವ್ಯಕ್ತಿ, ಆತನನ್ನು ಬಂಧಿಸಿ, ಭದ್ರವಾಗಿ ಕರೆದೊಯ್ಯಿರಿ,” ಎಂದು ಮೊದಲೇ ಸೂಚನೆಕೊಟ್ಟಿದ್ದನು.


ತಕ್ಷಣ ಆ ಜನರು ಯೇಸುವನ್ನು ಹಿಡಿದು ಬಂಧಿಸಿದರು.


ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು