Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:48 - ಕನ್ನಡ ಸತ್ಯವೇದವು C.L. Bible (BSI)

48 ಯೇಸುಸ್ವಾಮಿ ಆ ಗುಂಪಿಗೆ, “ದರೋಡೆಗಾರರನ್ನು ಹಿಡಿಯುವುದಕ್ಕೋ ಎಂಬಂತೆ ನನ್ನನ್ನು ಬಂಧಿಸಲು ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ಬರಬೇಕಾಗಿತ್ತೇ? ನಾನು ಪ್ರತೀದಿನ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಬೋಧನೆಮಾಡುತ್ತಾ ಇದ್ದೆ; ಆಗ ನೀವು ನನ್ನನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆಗ ಯೇಸು, “ಒಬ್ಬ ಅಪರಾಧಿಯನ್ನು ಬಂಧಿಸುವಂತೆ ನೀವು ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತೆಗೆದುಕೊಂಡು ಬರಬೇಕಿತ್ತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಯೇಸು ಅವರಿಗೆ, “ಖಡ್ಗಗಳನ್ನು ಮತ್ತು ದೊಣ್ಣೆಗಳನ್ನು ತೆಗೆದುಕೊಂಡು ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬರುವಂತೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತನ್ನಾ ಜೆಜುನ್ ತೆಂಕಾ ಎಕ್ ಚೊರಾಕ್ ಧರುಕ್ ಯೆಲ್ಲ್ಯಾ ಸರ್ಕೆ, ಕೊಯ್ತೆ, ಟೊನೆ ಘೆವ್ನ್ ತುಮಿ ಕಶ್ಯಾಕ್ ಯೆಲ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:48
7 ತಿಳಿವುಗಳ ಹೋಲಿಕೆ  

ನನ್ನ ಒಡೆಯ, ತಮ್ಮ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೆ? ನಾನೇನು ಮಾಡಿದೆ? ಯಾವ ಪಾಪಕ್ಕೆ ಕೈಹಾಕಿದೆ?


ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು.


ಆಗ ಸಮೀಪದಲ್ಲಿದ್ದವರಲ್ಲಿ ಒಬ್ಬನು, ತನ್ನ ಖಡ್ಗವನ್ನು ಹಿರಿದು, ಪ್ರಧಾನಯಾಜಕನ ಆಳನ್ನು ಹೊಡೆದು, ಅವನ ಕಿವಿಯನ್ನು ಕತ್ತರಿಸಿಬಿಟ್ಟನು.


ಆದರೆ ಪವಿತ್ರಗ್ರಂಥದಲ್ಲಿ ಬರೆದಿರುವುದು ನೆರವೇರುವಂತೆ ಇದೆಲ್ಲಾ ಸಂಭವಿಸಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು