Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:5 - ಕನ್ನಡ ಸತ್ಯವೇದವು C.L. Bible (BSI)

5 ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಳಿಗಿಂತ ಹೆಚ್ಚು ಬೆಲೆಗೆ ಮಾರಿ, ಆ ಹಣವನ್ನು ಬಡವರಿಗೆ ಕೊಡಬಹುದಾಗಿತ್ತಲ್ಲವೆ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು, ಆಕೆಯನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದನ್ನು ಮುನ್ನೂರು ಹಣಕ್ಕಿಂತ ಹೆಚ್ಚು ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಎಂದು ಹೇಳಿ ಆಕೆಗೆ ಛೀ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅದು ಒಂದು ವರ್ಷದ ಸಂಪಾದನೆಗಿಂತ ಹೆಚ್ಚು ಬೆಲೆಬಾಳುತ್ತಿತ್ತು. ಅದನ್ನು ಮಾರಿ ಬಂದ ಹಣವನ್ನು ಬಡಜನರಿಗೆ ಕೊಡಬಹುದಾಗಿತ್ತು” ಎಂದು ಹೇಳಿ ಆ ಸ್ತ್ರೀಯನ್ನು ಕಟುವಾಗಿ ಟೀಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಆಕೆಯನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಹೆ ತೆಲ್ ತಿನ್ ಸೆಂಬರ್ ಚಾಂದಿಚ್ಯಾ ಪೈಸ್ಯಾಕ್ನಿ ಇಕುನ್ ಯೆಲ್ಲೆ ಪೈಸೆ ಗರಿಬಾಕ್ನಿ ದಿಲ್ಯಾರ್ ಹೊಯ್ನಸಿತ್ತೆ ಕಾಯ್?” ಮನುನ್ ತ್ಯಾ ಬಾಯ್ಕೊಮನ್ಸಿಕ್ ಜೊರ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:5
17 ತಿಳಿವುಗಳ ಹೋಲಿಕೆ  

ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ, ‘ಹಬ್ಬಕ್ಕೆ ನಮಗೆ ಬೇಕಾದುದನ್ನು ಕೊಂಡು ಬಾ,’ ಎಂದೋ, ‘ಬಡವರಿಗೆ ಏನಾದರೂ ಕೊಡು’ ಎಂದೋ, ಯೇಸು ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿದರು.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ.


ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.


ಅದಕ್ಕೆ ಯೇಸು, “ನಿಮ್ಮನಿಮ್ಮೊಳಗೆ ಗೊಣಗುಟ್ಟದಿರಿ.


ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು.


ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.


ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.


“ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.


ಗೊಣಗುಟ್ಟಿದರು ತಮ್ಮ ಗುಡಾರಗಳಲಿ I ನಂಬಿಕೆಯಿಡಲಿಲ್ಲ ಆತನ ಮಾತಿನಲಿ II


ನಿಮ್ಮ ನಿಮ್ಮ ಡೇರೆಗಳಲ್ಲಿ ಗೊಣಗುಟ್ಟಿದಿರಿ; ‘ಸರ್ವೇಶ್ವರ ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಅಮೋರಿಯರ ಕೈಗೆ ಒಪ್ಪಿಸಿ ಸಂಹರಿಸಬೇಕೆಂದೇ.


ಅಲ್ಲಿದ್ದ ಕೆಲವರು ಇದನ್ನು ಕಂಡು ಸಿಟ್ಟಿನಿಂದ, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?


ಅದಕ್ಕೆ ಯೇಸು, “ಈಕೆಯನ್ನು ಸುಮ್ಮನೆ ಬಿಡಿ, ಕಿರುಕುಳ ಕೊಡಬೇಡಿ; ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ;


ಈ ತೈಲವನ್ನು ಅಧಿಕ ಬೆಲೆಗೆ ಮಾರಿ, ಬಂದ ಹಣವನ್ನು ಬಡವರಿಗೆ ಕೊಡಬಹುದಿತ್ತಲ್ಲಾ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು