Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:6 - ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಯೇಸು, “ಈಕೆಯನ್ನು ಸುಮ್ಮನೆ ಬಿಡಿ, ಕಿರುಕುಳ ಕೊಡಬೇಡಿ; ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಯೇಸು - ಈಕೆಯನ್ನು ಬಿಡಿರಿ. ಈಕೆಗೆ ಯಾಕೆ ತೊಂದರೆಕೊಡುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು, “ಆಕೆಗೆ ತೊಂದರೆ ಕೊಡಬೇಡಿ. ನೀವು ಆಕೆಯನ್ನು ಕಾಡಿಸುವುದೇಕೆ? ಅವಳು ನನಗಾಗಿ ಬಹಳ ಒಳ್ಳೆಯದನ್ನು ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಯೇಸು, “ಈಕೆಯನ್ನು ಬಿಟ್ಟುಬಿಡಿರಿ, ಈಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಜೆಜುನ್ ಗಪ್ ರ್‍ಹಾವಾ,ತಿಕಾ ಸೊಡುನ್ ಸೊಡಾ ತಿಕಾ ಕಶ್ಯಾಕ್ ತರಾಸ್ ದಿವ್ಕ್ ಲಾಗ್ಲ್ಯಾಶಿ, ತೆನಿ ಮಾಜೆ ಸಾಟ್ನಿ ಎಕ್ ಎಗ್ದಮ್ ಬರೆ ಕಾಮ್ ಕರ್‍ಲಿನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:6
23 ತಿಳಿವುಗಳ ಹೋಲಿಕೆ  

ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ಇದನ್ನು ಅರಿತುಕೊಂಡ ಯೇಸು ಶಿಷ್ಯರಿಗೆ, “ಈ ಮಹಿಳೆಗೇಕೆ ಕಿರುಕುಳ ಕೊಡುತ್ತೀರಿ? ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.


ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ಅಂತೆಯೇ, ತನ್ನನ್ನು ತಾನೇ ಹೊಗಳಿಕೊಳ್ಳುವವನು ಅಲ್ಲ, ಪ್ರಭು ಯಾರನ್ನು ಹೊಗಳುತ್ತಾರೋ, ಅವನೇ ಧನ್ಯನು.


ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಳಿಗಿಂತ ಹೆಚ್ಚು ಬೆಲೆಗೆ ಮಾರಿ, ಆ ಹಣವನ್ನು ಬಡವರಿಗೆ ಕೊಡಬಹುದಾಗಿತ್ತಲ್ಲವೆ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು, ಆಕೆಯನ್ನು ನಿಂದಿಸಿದರು.


ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಅವರಿಗೆ ಯಾವಾಗ ಬೇಕಾದರೂ ನೀವು ಸಹಾಯ ಮಾಡಬಹುದು. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು