ಮಾರ್ಕ 14:60 - ಕನ್ನಡ ಸತ್ಯವೇದವು C.L. Bible (BSI)60 ಆಗ ಪ್ರಧಾನಯಾಜಕನು ಸಭೆಯ ಮಧ್ಯೆ ಎದ್ದುನಿಂತು, ಯೇಸುವನ್ನು ನೋಡಿ, “ಈ ಜನರು ನಿನಗೆ ವಿರುದ್ಧವಾಗಿ ತಂದಿರುವ ಆರೋಪಣೆಗಳನ್ನು ಕೇಳುತ್ತಿರುವೆಯಾ? ಇವುಗಳಿಗೆ ನಿನ್ನ ಉತ್ತರವೇನು?” ಎಂದು ಪ್ರಶ್ನಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, “ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?” ಎಂದು ಯೇಸುವನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)60 ಆಗ ಮಹಾಯಾಜಕನು ಎದ್ದು ನಡುವೆ ನಿಂತು - ನೀನೇನೂ ಉತ್ತರಹೇಳುವದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು? ಎಂದು ಯೇಸುವನ್ನು ಪ್ರಶ್ನಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್60 ಆಗ ಪ್ರಧಾನಯಾಜಕನು ಎಲ್ಲಾ ಜನರೆದುರಿಗೆ ಎದ್ದುನಿಂತು, ಯೇಸುವಿಗೆ, “ಈ ಜನರು ನಿನಗೆ ವಿರುದ್ಧವಾಗಿ ಹೊರಿಸುತ್ತಿರುವ ಈ ಆರೋಪಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯೋ? ಜನರು ಹೇಳುತ್ತಿರುವುದು ನಿಜವೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ಆಗ ಮಹಾಯಾಜಕನು ಎದ್ದು ಮುಂದೆ ನಿಂತು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್60 ತನ್ನಾ ಮಹಾಯಾಜಕ್ ಸಗ್ಳ್ಯಾಂಚ್ಯಾ ಫಿಡ್ಯಾತ್ ಇಬೆ ರ್‍ಹಾಲೊ ಅನಿ ಜೆಜುಕ್ “ಹಿ ಲೊಕಾ ತುಜೆ ವರ್‍ತಿ ಕಾಯ್-ಕಾಯ್ ಅಪ್ವಾದ್ ಘಾಲುಲ್ಯಾತ್, ಹೆಕಾ ತುಜೆಕ್ಡೆ ಕಾಯ್ಬಿ ಜಾಬ್ ನಾ ಕಾಯ್?” ಮನುನ್ ಪ್ರಸ್ನ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |