Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:67 - ಕನ್ನಡ ಸತ್ಯವೇದವು C.L. Bible (BSI)

67 ಚಳಿಕಾಯಿಸಿಕೊಳ್ಳುತ್ತಿದ್ದ ಪೇತ್ರನನ್ನು ಆಕೆ ದಿಟ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನ ಸಂಗಡ ಇದ್ದವನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ಅವನು ಚಳಿಕಾಯಿಸಿಕೊಳ್ಳುತ್ತಿರುವದನ್ನು ಕಂಡು ಅವನನ್ನು ನೋಡಿ - ನೀನು ಸಹ ಆ ನಜರೇತಿನವನಾದ ಯೇಸುವಿನ ಕೂಡ ಇದ್ದವನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

67 ಪೇತ್ರನು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಅವಳು ಕಂಡು, ಪೇತ್ರನನ್ನು ಹತ್ತಿರದಿಂದ ದಿಟ್ಟಿಸಿ ನೋಡಿ, “ನೀನು ನಜರೇತಿನವನಾದ ಯೇಸುವಿನ ಜೊತೆ ಇದ್ದವನಲ್ಲವೇ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

67 ಪೇತ್ರನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

67 ತೆನಿ ಪೆದ್ರು ಆಗಿಕ್ಡೆ ಬಸುನ್ ಆಗ್ ಶೆಕ್ತಲೆ ಬಗಟ್ಲಿನ್,ತೆನಿ ಬರೆ ಕರುನ್ ಪೆದ್ರುಕ್ ಬಗುನ್ “ತಿಯಾಬಿ ನಜರೆತಾಚ್ಯಾ ಜೆಜುಚ್ಯಾ ವಾಂಗ್ಡಾ ಹೊತ್ತೆ ನ್ಹಯ್?” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:67
9 ತಿಳಿವುಗಳ ಹೋಲಿಕೆ  

ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು ಹೊರಾಂಗಣದಲ್ಲಿ, ಪಹರೆಯವರ ಜೊತೆಯಲ್ಲಿ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಪಿಲಾತನು ಒಂದು ಫಲಕದ ಮೇಲೆ, ‘ನಜರೇತಿನ ಯೇಸು, ಯೆಹೂದ್ಯರ ಅರಸ’ ಎಂದು ಬರೆಸಿ ಶಿಲುಬೆಯ ಮೇಲ್ಗಡೆ ಇರಿಸಿದರು.


ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್‍ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು.


ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.


“ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.


ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.


ಆಗ ಚಳಿಯಿದ್ದುದರಿಂದ ಸೇವಕರೂ ಕಾವಲಾಳುಗಳೂ ಇದ್ದಲಿನ ಬೆಂಕಿಮಾಡಿ, ಸುತ್ತಲೂ ನಿಂತು ಚಳಿಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು