Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:72 - ಕನ್ನಡ ಸತ್ಯವೇದವು C.L. Bible (BSI)

72 “ಕೋಳಿ ಎರಡು ಸಾರಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ಮೂರು ಬಾರಿ ನನ್ನನ್ನು ನಿರಾಕರಿಸುವೆ” ಎಂದು ಯೇಸು ಹೇಳಿದ್ದ ಮಾತು ಪೇತ್ರನ ನೆನಪಿಗೆ ಬಂದಿತು. ದುಃಖದ ಕಟ್ಟೆಯೊಡೆದು ಆತನು ಬಿಕ್ಕಿಬಿಕ್ಕಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

72 ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

72 ಆಗ ಪೇತ್ರನು - ಕೋಳಿ ಎರಡು ಸಾರಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಂಡು ಆ ವಿಷಯದಲ್ಲಿ ಯೋಚಿಸಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

72 ಪೇತ್ರನು ಇದನ್ನು ಹೇಳಿದ ಮೇಲೆ ಕೋಳಿ ಎರಡನೇ ಸಾರಿ ಕೂಗಿತು. “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ, ನೀನು ನನ್ನನ್ನು ತಿಳಿದಿಲ್ಲವೆಂದು ಮೂರು ಸಾರಿ ಹೇಳುವೆ” ಎಂದು ಯೇಸು ತನಗೆ ಹೇಳಿದ್ದನ್ನು ಪೇತ್ರನು ಜ್ಞಾಪಿಸಿಕೊಂಡು ಬಹಳ ದುಃಖದಿಂದ ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

72 ಕೂಡಲೇ ಎರಡನೆಯ ಸಾರಿ ಹುಂಜ ಕೂಗಿತು. ಹೀಗೆ, “ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

72 ಪೆದ್ರು ಅಶೆ ಮನುನ್ ಸಾಂಗ್ತಾನಾ ಕೊಂಬ್ಯಾನ್ ದೊನ್ವೆ ಪಟಿ ಭೊಕ್ಲ್ಯಾನ್, ಜೆಜುನ್ ತೆಕಾ “ದೊನ್ದಾ ಕೊಂಬೊ ಭೊಕುಚ್ಯಾ ಅದ್ದಿ ತಿಯಾ ತುಕಾ ಮಾಜಿ ಒಳಕುಚ್ ನಾ ಮನುನ್ ತಿನ್ದಾ ಸಾಂಗ್ತೆ” ಮನುನ್ ಸಾಂಗಲ್ಲ್ಯಾ ಗೊಸ್ಟಿಯಾಂಚಿ ಪೆದ್ರುಕ್ ಯಾದ್ ಯೆಲಿ, ತನ್ನಾ ತೊ ಕೊಸಳ್ಳೊ ಅನಿ ಗಳ್ಗಳುನ್ ರಡ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:72
15 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಎರಡು ಸಾರಿ ಕೂಗುವ ಮೊದಲೇ, ‘ಆತನನ್ನು ನಾನರಿಯೆ’ ಎಂದು ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ, ಇದು ಖಂಡಿತ,” ಎಂದರು.


ಪೇತ್ರನು ಆಕೆ ಹೇಳಿದ್ದನ್ನು ನಿರಾಕರಿಸಿದನು. “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ; ನನಗೇನೂ ತಿಳಿಯದು,” ಎಂದುಬಿಟ್ಟನು. ಅಲ್ಲಿಂದ ಎದ್ದು ದ್ವಾರಮಂಟಪಕ್ಕೆ ಹೋದನು (ಆಗ ಕೋಳಿ ಕೂಗಿತು).


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;


ಅವನು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಅದಕ್ಕೆ ಪೇತ್ರನು, “ನೀನು ಏನು ಹೇಳುತ್ತೀಯೋ ನನಗೆ ಅರ್ಥವಾಗುವುದಿಲ್ಲ,” ಎಂದನು. ಆಕ್ಷಣವೇ, ಅವನು ಇನ್ನೂ ಮಾತನಾಡುತ್ತಿರುವಾಗಲೇ, ಕೋಳಿ ಕೂಗಿತು.


ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ನೀನು ಮೂರು ಬಾರಿ ನನ್ನನ್ನು ನಿರಾಕರಿಸುವೆ; ಇದು ಖಂಡಿತ,” ಎಂದರು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ಆಗ ಪೇತ್ರನು, “ನೀವು ಹೇಳುವ ಆ ಮನುಷ್ಯ ಯಾರೆಂದು ನಾನರಿಯೆ,” ಎಂದು ಹೇಳಿ ಆಣೆಯಿಡುವುದಕ್ಕೂ ಶಪಿಸಿಕೊಳ್ಳುವುದಕ್ಕೂ ತೊಡಗಿದನು. ಕೂಡಲೇ ಕೋಳಿ ಎರಡನೆಯ ಸಾರಿ ಕೂಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು