Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:10 - ಕನ್ನಡ ಸತ್ಯವೇದವು C.L. Bible (BSI)

10 ಏಕೆಂದರೆ, ಮುಖ್ಯಯಾಜಕರು ಅಸೂಯೆಯಿಂದಲೇ ಯೇಸುವನ್ನು ತನಗೆ ಒಪ್ಪಿಸಿದ್ದಾರೆ ಎಂದು ಅವನಿಗೆ ಚೆನ್ನಾಗಿ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮಹಾಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಬಂಧಿಸಿ ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮುಖ್ಯಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮುಖ್ಯ ಯಾಜಕಾನಿ ಪೊಟಾತ್ ಆಗ್ ಪಡುನ್ ಜೆಜುಕ್ ಧರುನ್ ಅಪ್ನಾಕ್ಡೆ ಘೆವ್ನ್ ಯೆಲ್ಯಾತ್ ಮನುನ್ ಪಿಲಾತಾಕ್ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:10
13 ತಿಳಿವುಗಳ ಹೋಲಿಕೆ  

ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರದ ಮುಂದೆ ನಿಲ್ಲಬಲ್ಲವರಾರು?


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು.


ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಅಣ್ಣಂದಿರೋ ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ತಂದೆ ಈ ವಿಷಯವನ್ನು ಮನಸ್ಸಿನಲ್ಲೇ ಮೆಲುಕುಹಾಕಿದ.


“ಯೆಹೂದ್ಯರ ಅರಸನನ್ನು ನಾನು ನಿಮಗೆ ಬಿಟ್ಟುಕೊಡಬಹುದೋ?" ಎಂದು ಅವರನ್ನು ಕೇಳಿದನು.


ಆದರೆ ಬರಬ್ಬನನ್ನೇ ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮುಖ್ಯಯಾಜಕರು ಜನರನ್ನು ಪ್ರಚೋದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು