Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:2 - ಕನ್ನಡ ಸತ್ಯವೇದವು C.L. Bible (BSI)

2 ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪಿಲಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, “ನೀನೇ ಹೇಳಿದ್ದೀ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪಿಲಾತನು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಲು ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದ್ದು ಸರಿ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಲು, “ನೀನೇ ಅದನ್ನು ಹೇಳಿದ್ದೀ” ಎಂದು ಯೇಸು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಿಲಾತಾನ್ ತೆಕಾ “ತಿಯಾ ಜುದೆವಾಂಚೊ ರಾಜಾ ಕಾಯ್?” ಮನುನ್ ಇಚಾರಲ್ಲ್ಯಾಕ್, ಜೆಜುನ್ “ತಿಯಾ ಸಾಂಗಲ್ಲ್ಯಾ ಸರ್ಕೆಚ್” ಮನುನ್ ಜಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:2
11 ತಿಳಿವುಗಳ ಹೋಲಿಕೆ  

“ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಅವರ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ‘ಈತ ಯೆಹೂದ್ಯರ ಅರಸ’ ಎಂದು ಬರೆಯಲಾಗಿತ್ತು.


ತರುವಾಯ, “ಯೆಹೂದ್ಯರ ಅರಸನಿಗೆ ಜಯವಾಗಲಿ,” ಎಂದು ನಾಟಕೀಯವಾಗಿ ವಂದಿಸಿದರು.


ಆಗ ಪಿಲಾತನು ಪುನಃ, “ಹಾಗಾದರೆ ಯೆಹೂದ್ಯರ ಅರಸನೆಂದು ನೀವು ಕರೆಯುವ ಈತನನ್ನು ನಾನೇನು ಮಾಡಲಿ?” ಎಂದು ಜನರನ್ನು ಕೇಳಿದನು.


“ಯೆಹೂದ್ಯರ ಅರಸನನ್ನು ನಾನು ನಿಮಗೆ ಬಿಟ್ಟುಕೊಡಬಹುದೋ?" ಎಂದು ಅವರನ್ನು ಕೇಳಿದನು.


ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ಆಪಾದನೆಗಳನ್ನು ಹೊರಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು