Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:24 - ಕನ್ನಡ ಸತ್ಯವೇದವು C.L. Bible (BSI)

24 ಕೊನೆಗೆ ಅವರನ್ನು ಶಿಲುಬೆಗೆ ಏರಿಸಿದರು. ಅವರ ಬಟ್ಟೆಗಳನ್ನು ಯಾವುಯಾವುದು ಯಾರು ಯಾರಿಗೆ ಸಿಗಬೇಕೆಂದು ತಿಳಿಯಲು ಚೀಟುಹಾಕಿ ತಮ್ಮತಮ್ಮೊಳಗೆ ಹಂಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವ ಯಾವದು ಯಾರಾರಿಗೆ ಆಗಬೇಕೆಂದು ಚೀಟುಹಾಕಿ ಪಾಲುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸೈನಿಕರು ಯೇಸುವನ್ನು ಶಿಲುಬೆಗೆ ನೇತುಹಾಕಿ, ಮೊಳೆಗಳನ್ನು ಜಡಿದರು. ನಂತರ ಸೈನಿಕರು ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ಬಟ್ಟೆಗಳನ್ನು ಪಾಲುಮಾಡಿಕೊಂಡರು. ಯಾರಿಗೆ ಯಾವುದು ಬರುವುದೋ ಎಂದು ಚೀಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಸಯ್ನಿಕಾನಿ ಜೆಜುಕ್ ಕುರ್ಸಾ ವರ್ತಿ ಮಾರುನ್, ಚಿಟಿಯಾ ಘಾಲುನ್ ತೆಚೆ ಕಪ್ಡೆ ಕೊನಾಕ್ ಯೆತ್ಯಾತ್ ಮನುನ್ ವಾಟುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:24
11 ತಿಳಿವುಗಳ ಹೋಲಿಕೆ  

ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ನೀವು ಶಿಲುಬೆಗೇರಿಸಿ ಕೊಂದುಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ.


ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು