Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:26 - ಕನ್ನಡ ಸತ್ಯವೇದವು C.L. Bible (BSI)

26 ಅವರ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ‘ಈತ ಯೆಹೂದ್ಯರ ಅರಸ’ ಎಂದು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ ಅವರು ಹೊರಿಸಿದ ಅಪರಾಧವನ್ನು ಸೂಚಿಸುವ ಒಂದು ವಿಳಾಸವು ಶಿಲುಬೆಯ ಮೇಲೆ ಬರೆದಿತ್ತು; ಅದೇನಂದರೆ - ಯೆಹೂದ್ಯರ ಅರಸನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “ಯೆಹೂದ್ಯರ ರಾಜ” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೇಸುವಿನ ಮೇಲೆ ಹೊರಿಸಿದ ದೋಷಾರೋಪಣೆ ಹೀಗೆ ಬರೆದಿತ್ತು: ಈತನು ಯೆಹೂದ್ಯರ ಅರಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆಜುಚ್ಯಾ ವರ್‍ತಿ ಘಾಟಲ್ಲೊ ಅಪ್ವಾದ್ “ಜುದೆವಾಂಚೊ ರಾಜಾ” ಮನುನ್ ಲಿವಲ್ಲೆ ಥೈ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:26
14 ತಿಳಿವುಗಳ ಹೋಲಿಕೆ  

“ಈತ ಯೇಸು, ಯೆಹೂದ್ಯರ ಅರಸ” ಎಂದು ಬರೆದಿದ್ದ ದೋಷಾರೋಪಣೆಯ ಫಲಕವನ್ನು ಅವರ ಶಿರಸ್ಸಿನ ಮೇಲ್ಭಾಗದಲ್ಲಿ ಇಟ್ಟರು.


“ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು.


ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ಆದರೂ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ, ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಅಲ್ಲದೆ ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.


ಇಸ್ರಯೇಲರ ಅರಸನಾದ ಈ ಕ್ರಿಸ್ತನು ಶಿಲುಬೆಯಿಂದ ಇಳಿದುಬರಲಿ; ಆಗ ನೋಡಿ ನಂಬುತ್ತೇವೆ,” ಎಂದು ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದವರು ಸಹ ಅವರನ್ನು ಹಂಗಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು