Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:3 - ಕನ್ನಡ ಸತ್ಯವೇದವು C.L. Bible (BSI)

3 ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ಆಪಾದನೆಗಳನ್ನು ಹೊರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3-4 ಮಹಾಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು. ಆಗ ಪಿಲಾತನು ಇನ್ನೊಂದಾವರ್ತಿ ಆತನನ್ನು - ನೀನು ಏನೂ ಉತ್ತರಕೊಡುವದಿಲ್ಲವೇ? ಇವರು ನಿನ್ನ ಮೇಲೆ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮಹಾಯಾಜಕರು ಯೇಸುವಿನ ಮೇಲೆ ಅನೇಕ ತಪ್ಪುಗಳನ್ನು ಹೊರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ದೂರುಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮುಖ್ಯ ಯಾಜಕಾನಿ ಜೆಜುಚ್ಯಾ ವರ್‍ತಿ ಸುಮಾರ್ ಅಪ್ವಾದಾ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:3
11 ತಿಳಿವುಗಳ ಹೋಲಿಕೆ  

ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆ ಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು.


ಆದರೆ ಯೇಸು ಇನ್ನೊಂದು ಮಾತನ್ನೂ ಆಡದೆ ಮೌನವಾಗಿದ್ದರು. ಇದನ್ನು ಕಂಡು ಪಿಲಾತನು ಆಶ್ಚರ್ಯಪಟ್ಟನು.


ಆದರೆ ಮುಖ್ಯಯಾಜಕರೂ ಊರಪ್ರಮುಖರೂ ಮಾಡಿದ ಆಪಾದನೆಗಳಿಗೆ ಅವರು ಏನೂ ಉತ್ತರಕೊಡಲಿಲ್ಲ.


ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು.


ಆದುದರಿಂದ ಪಿಲಾತನು ಪುನಃ ಯೇಸುವನ್ನು, “ಇವರು ಇಷ್ಟೊಂದು ಆಪಾದನೆಗಳನ್ನು ನಿನ್ನ ಮೇಲೆ ಹೊರಿಸುತ್ತಿರುವಾಗ ನೀನು ಯಾವ ಉತ್ತರವನ್ನೂ ಕೊಡುವುದಿಲ್ಲವೆ?” ಎಂದು ಕೇಳಿದನು.


ಅಹುದಹುದು ಕಿವಿ ಕೇಳಿಸದವನಂತಿದ್ದೆ I ಪ್ರತ್ಯುತ್ತರ ಕೊಡಲಾಗದವನಂತಿದ್ದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು