Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:34 - ಕನ್ನಡ ಸತ್ಯವೇದವು C.L. Bible (BSI)

34 ಮೂರನೆಯ ಗಂಟೆಯ ಸಮಯದಲ್ಲಿ, ಯೇಸುಸ್ವಾಮಿ: “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿದ್ದೀರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಮೂರು ಗಂಟೆಗೆ ಯೇಸು - ಎಲೋಹಿ, ಎಲೋಹಿ, ಲಮಾ ಸಬಕ್ತಾನೀ ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?” ಎಂಬುದೇ ಇದರರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಮೂರು ಗಂಟೆಯ ಸಮಯದಲ್ಲಿ ಯೇಸು, “ಎಲೋಹಿ, ಎಲೋಹಿ, ಲಮಾ ಸಬಕ್ತಾನೀ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತಿನ್ ಘಂಟ್ಯಾಕ್ ಜೆಜುನ್ ಜೊರಾನ್ “ಎಲೊಯಿ, ಎಲೊಯಿ ಲಾಮಾ, ಸಬಾಕ್ತಾನಿ?" ತಸೆ ಮಟ್ಲ್ಯಾರ್ "ಮಾಜ್ಯಾ ದೆವಾ, ಮಾಜ್ಯಾ ದೆವಾ, ತಿಯಾ ಮಾಕಾ ಕಶ್ಯಾಕ್ ಸೊಡ್ಲೆ?” ಮನುನ್ ಬೊಬ್ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:34
16 ತಿಳಿವುಗಳ ಹೋಲಿಕೆ  

ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


“ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II


ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II


ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ನಮ್ಮನ್ನೇಕೆ ಮರೆತುಬಿಟ್ಟೆ ಇಷ್ಟುಕಾಲ ನಮ್ಮನ್ನೇಕೆ ಕೈಬಿಟ್ಟೆ ಇಲ್ಲಿಯ ತನಕ?


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಯೇಸುವನ್ನು ಶಿಲುಬೆಗೇರಿಸಿದಾಗ, ಬೆಳಿಗ್ಗೆ ಸುಮಾರು ಒಂಭತ್ತು ಗಂಟೆಯಾಗಿತ್ತು.


ಅಲ್ಲಿ ನಿಂತಿದ್ದವರಲ್ಲಿ ಕೆಲವರು ಇದನ್ನು ಕೇಳಿ, “ಇಗೋ, ಇವನು ಎಲೀಯನನ್ನು ಕರೆಯುತ್ತಿದ್ದಾನೆ!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು