Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:40 - ಕನ್ನಡ ಸತ್ಯವೇದವು C.L. Bible (BSI)

40 ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40-41 ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40-41 ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು; ಇವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆ ಮಾಡುತ್ತಿದ್ದವರಾದ ಮಗ್ದಲದ ಮರಿಯ, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯ, ಸಲೋಮೆ ಎಂಬವರೂ ಆತನ ಸಂಗಡ ಯೆರೂಸಲೇವಿುಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಅಲ್ಲಿ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿ ಮರಿಯಳು, ಸಲೋಮೆಯು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಎಕ್ ಉಲ್ಲ್ಯಾ ಬಾಯ್ಕೊಮನ್ಸಾ ಉಲ್ಲೆಸೆ ದುರ್ ಇಬೆ ರವ್ನ್ ಬಗುನ್ಗೆತ್ ಹೊತ್ತ್ಯಾ, ಮರಿ ಮಾಗ್ದೆಲಿನ್, ಜಾಕೊಬ್ ಅನಿ ಜೊಸೆಂಚಿ ಬಾಯ್ ಮರಿ ಜಾಕೊಬ್ ತಿಚೊ ಧಾಕ್ಲೊ ಲೆಕ್ ಅನಿ ಸಲೊಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:40
18 ತಿಳಿವುಗಳ ಹೋಲಿಕೆ  

ಯೇಸುವಿನ ಪರಿಚಿತರೆಲ್ಲರು ಹಾಗೂ ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಮಹಿಳೆಯರು ದೂರದಲ್ಲಿ ನಿಂತುಕೊಂಡು ಇದೆಲ್ಲವನ್ನು ನೋಡುತ್ತಿದ್ದರು.


ಭಾನುವಾರ ಮುಂಜಾನೆ ಪುನರುತ್ಥಾನ ಹೊಂದಿದ ಯೇಸುಸ್ವಾಮಿ, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು. ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ.


‘ಸಬ್ಬತ್’ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.


ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಅಲ್ಲೇ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು.


ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?


ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?


ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿ ಮರಿಯಳು ಯೇಸುವಿನ ಪಾರ್ಥಿವ ಶರೀರವನ್ನು ಸಮಾಧಿಮಾಡಿದ್ದ ಸ್ಥಳವನ್ನು ಗುರುತಿಸಿಕೊಂಡರು.


ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.


ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;


ಸಬ್ಬತ್‍ದಿನ ಕಳೆದದ್ದೇ ಮಗ್ದಲದ ಮರಿಯಳು, ಯಕೋಬನ ತಾಯಿ ಮರಿಯಳು ಮತ್ತು ಸಲೋಮೆ ಯೇಸುವಿನ ಪಾರ್ಥಿವ ಶರೀರಕ್ಕೆ ಲೇಪಿಸಲೆಂದು ಸುಗಂಧದ್ರವ್ಯಗಳನ್ನು ಕೊಂಡುಕೊಂಡರು.


ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು