Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:46 - ಕನ್ನಡ ಸತ್ಯವೇದವು C.L. Bible (BSI)

46 ಜೋಸೆಫನು ನಾರುಮಡಿ ವಸ್ತ್ರವನ್ನು ಕೊಂಡುಕೊಂಡು ಬಂದು, ಯೇಸುವನ್ನು ಶಿಲುಬೆಯಿಂದ ಇಳಿಸಿ, ಆ ವಸ್ತ್ರದಿಂದ ಸುತ್ತಿದನು. ಅನಂತರ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಅದನ್ನಿರಿಸಿ, ಸಮಾಧಿಯ ದ್ವಾರಕ್ಕೆ ದೊಡ್ಡ ಕಲ್ಲನ್ನು ಉರುಳಿಸಿ ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಯೋಸೇಫನು ನಾರು ಮಡಿಯನ್ನು ಕೊಂಡುತಂದು ಆತನನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವನು ಶುಭ್ರವಾದ ನಾರುಬಟ್ಟೆಯನ್ನು ಕೊಂಡುಕೊಂಡು ಬಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ಆ ನಾರುಬಟ್ಟೆಯಲ್ಲಿ ಅದನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಯೇಸುವಿನ ಸಮಾಧಿಯ ದ್ವಾರಕ್ಕೆ ಒಂದು ಬಂಡೆಯನ್ನು ಉರುಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಜುಜೆನ್ ಮಡೆ ಸಮಾದಿ ಕರುಕ್ ವಾಪರ್ತಲೊ ಮ್ಹಾಗ್ರೊ ಕಪ್ಡೊ ಇಕಾತ್ ಘೆವ್ನ್ ಯೆಲ್ಯಾನ್, ಅನಿ ಜೆಜುಚೆ ಮಡೆ ಕುರ್ಸಾ ವೈನಾ ಉತ್ರುನ್ ತ್ಯಾ ಕಪ್ಡ್ಯಾತ್ ಲಪ್ಟುನ್ ಸಮಾದಿತ್ ಥವ್ಲ್ಯಾನಿ. ತಿ ಸಮಾದಿ ಎಕುಚ್ ಎಕ್ ಗುಂಡ್ಯಾತ್ ಕೆದರಲ್ಲಿ ಸಮಾದಿ ಹೊತ್ತಿ. ತೆನಿ ಸಮಾದಿಚ್ಯಾ ದಾರ್ ಎಕ್ ಮೊಟೊ ಗುಂಡೊ ಗುಳ್ವುನ್ ಧಾಪ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:46
12 ತಿಳಿವುಗಳ ಹೋಲಿಕೆ  

ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.


ಯೇಸು ಸ್ವಾಮಿ ಮತ್ತೊಮ್ಮೆ ಮನಮರುಗಿ, ಸಮಾಧಿಯ ಬಳಿಗೆ ಬಂದರು. ಅದು ಒಂದು ಗವಿಯಾಗಿತ್ತು; ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಲಾಗಿತ್ತು.


ನಿನಗೇನು ಕೆಲಸವಿಲ್ಲಿ? ನಿನಗಾರಿಹರಿಲ್ಲಿ? ತೋಡಿಸಿಕೊಂಡಿರುವೆಯಾ ಗೂಡನ್ನಿಲ್ಲಿ? ಗೋರಿಯನ್ನು ಕೊರೆಯಿಸಿಕೊಂಡಿರುವೆಯಾ ಎತ್ತರದ ಬಂಡೆಯಲ್ಲಿ? ಕೆತ್ತಿಸಿಕೊಂಡಿರುವೆಯಾ ನಿನಗೊಂದು ನಿವಾಸವನಿಲ್ಲಿ?


ತರುವಾಯ ಶರೀರವನ್ನು ಶಿಲುಬೆಯಿಂದ ಇಳಿಸಿ, ನಾರುಮಡಿವಸ್ತ್ರದಲ್ಲಿ ಸುತ್ತಿ ಸಮಾಧಿಯಲ್ಲಿ ಇಟ್ಟನು. ಬಂಡೆಯೊಂದರಲ್ಲಿ ಕೊರೆಯಲಾಗಿದ್ದ ಈ ಸಮಾಧಿಯಲ್ಲಿ ಅದುವರೆಗೆ ಯಾರನ್ನೂ ಭೂಸ್ಥಾಪನೆ ಮಾಡಿರಲಿಲ್ಲ.


ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಯೇಸು ಸತ್ತಿದ್ದಾರೆಂದು ಅವನಿಂದ ತಿಳಿದುಕೊಂಡು ಪಾರ್ಥಿವ ಶರೀರವನ್ನು ಜೋಸೆಫನಿಗೆ ಕೊಡಿಸಿದನು.


ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿ ಮರಿಯಳು ಯೇಸುವಿನ ಪಾರ್ಥಿವ ಶರೀರವನ್ನು ಸಮಾಧಿಮಾಡಿದ್ದ ಸ್ಥಳವನ್ನು ಗುರುತಿಸಿಕೊಂಡರು.


ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ , ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು