Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:15 - ಕನ್ನಡ ಸತ್ಯವೇದವು C.L. Bible (BSI)

15 ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಾನಾ ಜೆಜುನ್ ತೆಂಕಾ “ಸಗ್ಳ್ಯಾ ದುನಿಯಾ ವರ್‍ತಿ ಜಾವಾ ಅನಿ ಸಗ್ಳ್ಯಾ ಲೊಕಾಕ್ನಿ ಬರಿ ಖಬರ್ ಸಾಂಗಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:15
27 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಈ ಮೊದಲು ಎಲ್ಲಾ ಜನಾಂಗಗಳಿಗೆ ಶುಭಸಂದೇಶವನ್ನು ಪ್ರಕಟಿಸಬೇಕಾಗಿದೆ.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.


ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.


ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು