Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:17 - ಕನ್ನಡ ಸತ್ಯವೇದವು C.L. Bible (BSI)

17 ವಿಶ್ವಾಸಿಸುವುದರಿಂದ ಈ ಅದ್ಭುತಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆ ಕೊನ್ ವಿಶ್ವಾಸಾತ್ ರ್‍ಹಾತ್ಯಾತ್ ತೆಂಕಾ ವಿಚಿತ್ರ್ ಕಾಮಾ ಕರ್‍ತಲಿ. ಅನಿ ಮಾಜ್ಯಾ ನಾವಾನ್ ಗಿರೆ ಕಾಡ್ತಲಿ ತಾಕತ್ ದಿವ್ನ್ ಹೊತಾ, ಅನಿ ತೆನಿ ನ್ಹವ್ಯಾಚ್ ಬಾಸಾನಿ ಬೊಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:17
17 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದಲೂ ರೋಗಿಗಳನ್ನು ಮತ್ತು ಪಿಶಾಚಿಪೀಡಿತರನ್ನು ಜನರು ತರುತ್ತಿದ್ದರು; ಎಲ್ಲರೂ ಸ್ವಸ್ಥರಾಗುತ್ತಿದ್ದರು.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.


ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು.


ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.


ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.


ಪರವಶಾಭಾಷೆಯನ್ನು ಆಡುವವನು ಮಾನವನೊಡನಲ್ಲ, ದೇವರೊಡನೆ ಮಾತನಾಡುತ್ತಾನೆ. ಪವಿತ್ರಾತ್ಮರ ಪ್ರೇರಣೆಯಿಂದ ನಿಗೂಢ ವಿಷಯಗಳ ಬಗ್ಗೆ ಮಾತನಾಡುವುದರಿಂದ ಯಾರೂ ಆತನ ಮಾತನ್ನು ಅರ್ಥಮಾಡಿಕೊಳ್ಳಲಾರರು.


ಎಲ್ಲರೂ ರೋಗಗಳನ್ನು ಗುಣಪಡಿಸುವವರಲ್ಲ, ಎಲ್ಲರೂ ಪರೋಪಕಾರಿಗಳಲ್ಲ, ಎಲ್ಲರೂ ಪರಿಪಾಲಕರಲ್ಲ, ಎಲ್ಲರೂ ಬಹುಭಾಷಾಪಂಡಿತರಲ್ಲ, ಅಥವಾ ಎಲ್ಲರೂ ಆ ಭಾಷೆಗಳನ್ನು ವಿವರಿಸಿ ಹೇಳುವವರಲ್ಲ.


ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ.


ಹೀಗೆ ದಿನೇ ದಿನೇ ಮಾಡುತ್ತಿದ್ದಳು. ಇದರಿಂದ ಪೌಲನಿಗೆ ಬಹಳ ಬೇಸರವಾಯಿತು. ಅವಳ ಕಡೆಗೆ ತಿರುಗಿ, ಅವಳನ್ನು ಹಿಡಿದಿದ್ದ ದೆವ್ವಕ್ಕೆ, “ಇವಳನ್ನು ಬಿಟ್ಟು ತೊಲಗು ಎಂದು ಯೇಸುಕ್ರಿಸ್ತರ ನಾಮದಲ್ಲಿ ನಿನಗೆ ಆಜ್ಞಾಪಿಸುತ್ತೇನೆ,” ಎಂದನು. ಆ ಕ್ಷಣವೇ ಅದು ಅವಳನ್ನು ಬಿಟ್ಟುಹೋಯಿತು.


ಯೊವಾನ್ನನು ಯೇಸುಸ್ವಾಮಿಗೆ, “ಗುರುವೇ, ಯಾರೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲ. ಆದಕಾರಣ ಅವನನ್ನು ತಡೆದೆವು,” ಎಂದನು.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು