Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:18 - ಕನ್ನಡ ಸತ್ಯವೇದವು C.L. Bible (BSI)

18 ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ವಿಷಪದಾರ್ಥವನ್ನೇನಾದರೂ ಕುಡಿದರೂ ಅವರಿಗೆ ಯಾವ ಕೇಡೂ ಆಗುವದಿಲ್ಲ; ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಗುಣವಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ ಸಾಂಪ್ ಹಾತಿತ್ ಧರುನ್ ಘೆಟ್ಲ್ಯಾರ್ಬಿ ಕಸ್ಲೆ ವಿಸ್ ಫಿಲ್ಯಾರ್ಬಿ ತೆಂಕಾ ಕಾಯ್-ಕಾಯ್ ಹೊಯ್ನಾ, ತೆನಿ ಸಿಕ್ ಹೊತ್ತ್ಯಾಂಚ್ಯಾ ಆಂಗಾಕ್ ಅಪಡ್ಲ್ಯಾರ್ ತೆನಿ ಗುನ್ ಹೊತ್ಯಾತ್”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:18
21 ತಿಳಿವುಗಳ ಹೋಲಿಕೆ  

ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.


ಅವನು ಬಳಸಿದ ಕರವಸ್ತ್ರಗಳನ್ನೂ ಉಡುವಸ್ತ್ರಗಳನ್ನೂ ಜನರು ತೆಗೆದುಕೊಂಡು ಹೋಗಿ ವ್ಯಾಧಿಸ್ಥರಿಗೆ ಮುಟ್ಟಿಸಿದ್ದೇ, ಅವರ ವ್ಯಾಧಿಗಳು ಗುಣವಾಗುತ್ತಿದ್ದವು; ದೆವ್ವಗಳು ಬಿಟ್ಟುಹೋಗುತ್ತಿದ್ದವು.


ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.


ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು.


ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?


ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.


ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಅದೇ ಪವಿತ್ರಾತ್ಮರಿಂದ ಒಬ್ಬನಿಗೆ ಅಗಾಧ ವಿಶ್ವಾಸವೂ ಇನ್ನೊಬ್ಬನಿಗೆ ಸ್ವಸ್ಥತೆಯನ್ನೀಯುವ ಶಕ್ತಿಯೂ ದೊರಕುತ್ತವೆ.


ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.


ಈ ಅದ್ಭುತದಿಂದ ಗುಣಹೊಂದಿದ ಆ ವ್ಯಕ್ತಿಗೆ ನಲವತ್ತು ವರ್ಷ ಮೀರಿತ್ತು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು