Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:9 - ಕನ್ನಡ ಸತ್ಯವೇದವು C.L. Bible (BSI)

9 ಭಾನುವಾರ ಮುಂಜಾನೆ ಪುನರುತ್ಥಾನ ಹೊಂದಿದ ಯೇಸುಸ್ವಾಮಿ, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು. ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 [ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆಕೆಗೆ ಏಳು ದೆವ್ವಗಳನ್ನು ಬಿಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತನಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜೆಜು ಮರಲ್ಲ್ಯಾನಿತ್ನಾ ಝಿತ್ತೊ ಹೊವ್ನ್ ಉಟುನ್, ಮಟ್ಲ್ಯಾರ್ ಆಯ್ತಾರ್‍ಚೆ ನಸ್ಕಾತ್, ಸಗ್ಳ್ಯಾನಿಕಿ ಅದ್ದಿ ಮರಿ ಮಾಗ್ದೆಲಿನಾಕ್ ದಿಸ್ಲೊ. ಜೆಜುನ್ ತಿಚ್ಯಾ ಆಂಗಾತ್ನಾ ಸಾತ್ ಗಿರೆ ಕಾಡಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:9
12 ತಿಳಿವುಗಳ ಹೋಲಿಕೆ  

ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು,


ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿ ಮರಿಯಳು ಯೇಸುವಿನ ಪಾರ್ಥಿವ ಶರೀರವನ್ನು ಸಮಾಧಿಮಾಡಿದ್ದ ಸ್ಥಳವನ್ನು ಗುರುತಿಸಿಕೊಂಡರು.


ಆ ಮಹಿಳೆಯರ ಹೆಸರುಗಳು: ಮಗ್ದಲದ ಮರಿಯಳು, ಯೊವಾನ್ನಳು ಮತ್ತು ಯಕೋಬನ ತಾಯಿಯಾದ ಮರಿಯಳು. ಇವರಲ್ಲದೆ, ಇವರ ಸಂಗಡ ಇದ್ದ ಇತರ ಮಹಿಳೆಯರೂ ಪ್ರೇಷಿತರಿಗೆ ಈ ಸುದ್ದಿಯನ್ನು ತಿಳಿಸಿದರು.


ಅವರಲ್ಲಿ ಮಗ್ದಲದ ಮರಿಯಳು, ಯಕೋಬ ಹಾಗೂ ಜೋಸೆಫನ ತಾಯಿ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿ ಇದ್ದರು.


ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು.


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.


ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.


ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ, ಸಮಾಧಿಯಿಂದ ಹೊರಕ್ಕೆ ಬಂದು, ಅಲ್ಲಿಂದ ಓಡಿಹೋದರು. ಭಯದ ನಿಮಿತ್ತ ಅವರು ಯಾರಿಗೂ ಏನನ್ನೂ ಹೇಳಲಿಲ್ಲ.


ನಾಮಾನನು ರಾಜನ ಸನ್ನಿಧಿಗೆ ಹೋಗಿ, ಇಸ್ರಯೇಲ್ ನಾಡಿನ ಹುಡುಗಿ ಹೇಳಿದ್ದನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು