ಮಾರ್ಕ 2:14 - ಕನ್ನಡ ಸತ್ಯವೇದವು C.L. Bible (BSI)14 ಅಲ್ಲಿಂದ ಹೊರಟುಹೋಗುತ್ತಿರುವಾಗ ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು [ಅಲ್ಲಿಂದ] ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನ ಹಿಂದೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದ ಕಟ್ಟೆಯಲ್ಲಿ ಕುಳಿತಿದ್ದ ಅಲ್ಫಾಯನ ಮಗ ಲೇವಿಯನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅಶೆ ಅನಿಫಿಡೆ ಚಲುನ್ಗೆತ್ ಜಾತಾನಾ, ತೆರ್‍ಗಿ ವಸುಲ್ ಕರುನ್ಗೆತ್, ತೆರ್‍ಗಿ ವಸುಲ್ ಕರುಕ್ ಬಸ್ತಲ್ಯಾ ಜಾಗ್ಯಾರ್ ಬಸಲ್ಲ್ಯಾ, ಅಲ್ಫೆವಾಚ್ಯಾ ಲೆಕಾಕ್ ಲೆವಿಕ್ ಜೆಜುನ್ ಬಗಟ್ಲ್ಯಾನ್. ಅನಿ ಜೆಜುನ್ ತೆಕಾ “ಮಾಜ್ಯಾ ಫಾಟ್ನಾ ಯೆ” ಮಟ್ಲ್ಯಾನ್. ತನ್ನಾ ಲೆವಿ ಉಟ್ಲೊ ಅನಿ ಜೆಜುಚ್ಯಾ ಫಾಟ್ನಾ ಗೆಲೊ. ಅಧ್ಯಾಯವನ್ನು ನೋಡಿ |